ಶ್ರೀನಗರ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಜಂಗಮ್ ಮೇಲ್ಸೇತುವೆಯಲ್ಲಿ ಸ್ಫೋಟಕ ಪತ್ತೆಯಾಯಾದ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಜಮ್ಮು ಮತ್ತು ಕಾಶ್ಮೀರ ಅಧಿಕಾರಿಗಳು ರಸ್ತೆಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಿದ್ದು ಬಳಿಕ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿ ಸ್ಫೋಟಕ ವಸ್ತುವನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಪಟ್ಟನ್ ಪ್ರದೇಶದ ಜಂಗಮ್ ಫ್ಲೈಓವರ್ ಬಳಿಯ ಹೆದ್ದಾರಿ ಬದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕೆಲವೇ ಸಮಯದಲ್ಲಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಸ್ಪೋಟಕ ಸಾಧನವನ್ನು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರವಿರುವ ಕಾರಣ ಕೂಡಲೇ ಎಚ್ಚೆತ್ತ ಅಧಿಕಾರಿಗಳ ತಂಡದ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದಂತಾಗಿದೆ.
ಇದನ್ನೂ ಓದಿ: Kushtagi: ಪರಾರಿಯಾಗಲು ಯತ್ನಿಸಿದ ಕಳ್ಳನಿಗೆ ಸ್ಥಳೀಯರಿಂದ ಧರ್ಮದೇಟು