Advertisement

ಗುಣಮಟ್ಟದ ಉತ್ಪನ್ನ ರಫ್ತು ಮಾಡಿ

09:13 PM Feb 26, 2020 | Lakshmi GovindaRaj |

ಹಾಸನ: ಉದ್ಯಮಗಳು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ರಫ್ತು ಮಾಡುವ ಮೂಲಕ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಲಾಭಗಳಿಸಬಹುದಾಗಿದೆ.ಈ ನಿಟ್ಟಿನಲ್ಲಿ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಸಲಹೆ ನೀಡಿದರು.

Advertisement

ನಗರದ ಹೋಟೆಲ್‌ ಜ್ಯುವೆಲ್‌ ರಾಕ್‌ನಲ್ಲಿ ಬೆಂಗಳೂರು ಹಾಗೂ ಮೈಸೂರು ಶಾಖೆಯ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಕರ್ನಾಟಕ ಸರ್ಕಾರ ರಫ್ತು ಉತ್ತೇಜನಾ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಭಾವಿ ರಫ್ತುದಾರರಿಗೆ ಬುಧವಾರ ಹಮ್ಮಿಕೊಂಡಿದ್ದ ಒಂದು ದಿನದ ರಫ್ತು ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ರಫ್ತು ಮಾಡುವುದಕ್ಕಿಂತ ಆಮದು ಮಾಡಿಕೊಳ್ಳುವ ಪ್ರಮಾಣವೇ ಹೆಚ್ಚಾಗಿದೆ. ಕೇವಲ ದೊಡ್ಡ ಉದ್ಯಮಗಳೇ ಉತ್ಪನ್ನಗಳನ್ನು ರಫ್ತು ಮಾಡಬೇಕೆನ್ನುವ ನಿಯಮವಿಲ್ಲ, ಸಣ್ಣ ಉದ್ದಿಮೆದಾರರೂ ಕೂಡ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ರಫ್ತು ಮಾಡಬಹುದಾಗಿದೆ ಎಂದರು.

ಕಾರ್ಯಾಗಾರ ಸದ್ಬಳಕೆಯಾಗಲಿ: ಉದ್ದಿಮೆದಾರರು ತಮ್ಮ ಉತ್ಪನ್ನಗಳನ್ನು ಯಾವ ರೀತಿ ರಫ್ತು ಮಾಡಬೇಕು? ಎಲ್ಲಿ ರಫ್ತು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡುವ ಸಲುವಾಗಿ ಈ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನೇರವಾಗಿ ಮಾರಾಟ ಮಾಡಿ: ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಉತ್ಪನ್ನಗಳು ಸಹ ಉತ್ಪಾದಕರಿಂದ ನೇರವಾಗಿ ಮಾರಾಟವಾಗುತ್ತಿಲ್ಲ. ಬದಲಾಗಿ ಮೂರನೇ ವ್ಯಕ್ತಿಯಿಂದ ಮಾರಾಟವಾಗುತ್ತಿವೆ. ಹಾಗಾಗಿ ಉತ್ಪಾದಕರು ಹೆಚ್ಚು ಲಾಭಗಳಿಸಲು ಸಾಧ್ಯವಾಗುತ್ತಿಲ್ಲ ಎಂದೂ ಅವರು ಅಭಿಪ್ರಾಯಪಟ್ಟರು.

Advertisement

ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎನ್‌. ವಿಶ್ವನಾಥ್‌, ಕೆಎಸ್‌ಎಫ್ಸಿ ಮುಖ್ಯ ವ್ಯವಸ್ಥಾಪಕ ಕೆ.ಎಸ್‌.ಪರಮಶಿವಮೂರ್ತಿ, ವಿ.ಟಿ.ಪಿ.ಸಿ ಜಂಟಿ ನಿರ್ದೇಶಕ ಪ್ರವೀಣ್‌ ರಾಮದುರ್ಗ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಶಂಕರನಾರಾಯಣ್‌, ಸಿಡಾಕ್‌ ಜಂಟಿ ನಿರ್ದೇಶಕ‌ ಮಂಜುನಾಥಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾಲ ಸೌಲಭ್ಯ ಸದ್ಬಳಕೆಯಾಗಲಿ: ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ‌ ಎಂ ಧನಪಾಲ್‌ ಮಾತನಾಡಿ, ಹಿಂದೆ ಕೈಗಾರಿಕೆಗಳಿಗೆ ಸಾಲ ದೊರೆಯುವುದು ಕಷ್ಟವಾಗಿತ್ತು. ಆದರೆ ಪ್ರಸ್ತುತ ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರದಿಂದ ಹಾಗೂ ವಿವಿಧ ಹಣಕಾಸು ಸಂಸ್ಥೆಗಳಿಂದ ಹೆಚ್ಚು ನೆರವು ದೊರೆಯುತ್ತಿದ್ದರೂ ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಅಧಿಕ ಲಾಭಗಳಿಸಬಹುದು: ನಮ್ಮ ದೇಶದಲ್ಲಿ ಉತ್ತಮ ಗುಣಮಟ್ಟದ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಮಾನವ ಸಂಪನ್ಮೂಲ ದೊರೆಯುವುದರಿಂದ ಹೆಚ್ಚು ಉತ್ಪಾದನೆ ಮಾಡಿ ಅಧಿಕ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ಯುವ ಉದ್ಯಮಿಗಳು ಉತ್ಪನ್ನವನ್ನು ರಫ್ತು ಮಾಡಲು ಸರಿಯಾದ ಮಾಹಿತಿ ಪಡೆದು ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next