Advertisement
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಕೇಂದ್ರ ವಾಣಿಜ್ಯ ಇಲಾಖೆಯು ಮಂಗಳವಾರ ಆಯೋಜಿಸಿದ್ದ ವಾಣಿಜ್ಯ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು. ಕೃಷಿ ಕ್ಷೇತ್ರದ ಪ್ರಗತಿ ಮತ್ತು ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರಕಾರ ಸಿದ್ಧ ಎಂದು ಹೇಳಿದರು.
Related Articles
Advertisement
ರಫ್ತು ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ ಹಾಗೂ ಸುಧಾರಣೆಗೆ ಒತ್ತು ನೀಡಿ ಕೃಷಿ ರಫ್ತು ಕೇಂದ್ರ ಸ್ಥಾಪನೆಗೆ ರಾಜ್ಯ ಮುಂದಾಗಿದೆ. ನಮ್ಮ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಿಸಲು ಮಾರ್ಕೆಟಿಂಗ್ ಮತ್ತು ರಫ್ತು ಪ್ರಚಾರ ಚಟುವಟಿಕೆ ಬಗ್ಗೆಯೂ ರಾಜ್ಯ ಗಮನ ಹರಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಾಗತಿಕವಾಗಿ ಉತ್ತಮ ವ್ಯಾಪಾರ ಸಂಬಂಧ ಕಾಯ್ದುಕೊಂಡಿರುವ ಕರ್ನಾಟಕವು ಕಾಫಿ, ಸಾಂಬಾರು ಪದಾರ್ಥಗಳು, ರೇಷ್ಮೆ, ಗೋಡಂಬಿ, ಕರಕುಶಲ ವಸ್ತುಗಳಿಗೆ ಹಿಂದಿನಿಂದಲೂ ಹೆಸರುವಾಸಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಎಂಜಿನಿಯರಿಂಗ್ ಸರಕುಗಳು, ಸಿದ್ಧ ಉಡುಪುಗಳು, ಚರ್ಮದ ಸರಕು, ರಾಸಾಯನಿಕಗಳು, ಖನಿಜ ಮತ್ತು ಅದಿರುಗಳ ರಫ್ತಿನಲ್ಲಿ ಪ್ರಮುಖ ಸ್ಥಾನ ಪಡೆದಿದ್ದೇವೆ. ಇದರ ಜತೆಗೆ, ಕೃಷಿ ಉತ್ಪನ್ನಗಳ ರಫ್ತಿಗೆ ಉದ್ಯಮಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.