Advertisement

ಸಹಕಾರ ಬ್ಯಾಂಕ್‌ ಸಾಲ ಮರುಪಾವತಿ ಅವಧಿ ವಿಸ್ತರಣೆ

10:26 PM Jul 16, 2019 | Lakshmi GovindaRaj |

ಬೆಂಗಳೂರು: ಸಹಕಾರ ಸಂಘಗಳು ಹಾಗೂ ಬ್ಯಾಂಕ್‌ಗಳ ಮೂಲಕ 1 ಲಕ್ಷಕ್ಕಿಂತ ಹೆಚ್ಚಿನ ಸಾಲ ಪಡೆದು ಮರುಪಾವತಿಸದೇ ಇರುವ ರೈತರು ಜುಲೈ 31ರೊಳಗೆ 1 ಲಕ್ಷಕ್ಕಿಂತ ಹೆಚ್ಚಿನ ಸಾಲ ಹಾಗೂ ಅದರ ಮೇಲಿನ ಬಡ್ಡಿಯನ್ನು ಮರುಪಾವತಿಸಿದರೆ, ಅಂತಹ ರೈತರು ಸಾಲಮನ್ನಾ ಪ್ರಯೋಜನ ಪಡೆಯಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

Advertisement

ಸಹಕಾರ ಸಂಘಗಳಲ್ಲಿ 2018ರ ಜುಲೈ 10ಕ್ಕೆ ಹೊರ ಬಾಕಿ ಇರುವ ರೈತರ 1 ಲಕ್ಷದವರೆಗಿನ ರೈತರ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, 1 ಲಕ್ಷಕ್ಕಿಂತಲೂ ಹೆಚ್ಚಿನ ಸಾಲ ಪಡೆದಿದ್ದರೆ, ಹೆಚ್ಚಿನ ಹಣವನ್ನು 2019ರ ಮಾರ್ಚ್‌ 31ರೊಳಗೆ ರೈತರು ಪಾವತಿ ಮಾಡಿದರೆ ಮಾತ್ರ ಸಾಲಮನ್ನಾದ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ ಎಂದು ಸರ್ಕಾರ ಆದೇಶದಲ್ಲಿ ಷರತ್ತು ವಿಧಿಸಿತ್ತು.

ಸರ್ಕಾರದ ಷರತ್ತಿಗೆ ಒಳಪಟ್ಟು 1 ಲಕ್ಷಕ್ಕಿಂತಲೂ ಹೆಚ್ಚಿನ ಸಾಲ ಪಡೆದು ಮರುಪಾವತಿ ಮಾಡದೆ ಉಳಿಸಿಕೊಂಡಿರುವ ರೈತರು ಸಾಲಮನ್ನಾ ಯೋಜನೆಯ ಪ್ರಯೋಜನ ಪಡೆಯಲು 1 ಲಕ್ಷಕ್ಕಿಂತ ಹೆಚ್ಚಿನ ಸಾಲ ಹಾಗೂ ಅದರ ಮೇಲಿನ ಬಡ್ಡಿಯನ್ನು ಮರು ಪಾವತಿಸಲು ಜುಲೈ 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next