Advertisement

ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ‘ನಮ್ಮ ಮೆಟ್ರೋ’

08:47 AM Nov 17, 2021 | Team Udayavani |

ಬೆಂಗಳೂರು : ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನಾಳೆಯಿಂದ (ನವೆಂಬರ್ 18ರಿಂದ) ಈ ಆದೇಶ ಜಾರಿಗೆ ಬರಲಿದ್ದು, ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆವರೆಗೆ ರೈಲು ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

Advertisement

ಮಂಗಳವಾರ ಬಿಎಂಆರ್‌ಸಿಎಲ್ ಈ ಕುರಿತು ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರ ನವೆಂಬರ್ 6ರಂದು ರಾತ್ರಿ ಕರ್ಫ್ಯೂವನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಆದ್ದರಿಂದ ಮೆಟ್ರೋ ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ.

ಆದರೆ ಭಾನುವಾರ ಬೆಳಗ್ಗೆ 7 ಗಂಟೆಗೆ ರೈಲು ಸಂಚಾರ ಶುರುವಾಗಲಿದೆ. ಇನ್ನು ನಾಗಸಂದ್ರ, ಸಿಲ್ಕ್ ಬೋರ್ಡ್, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ.

ಮೆಟ್ರೋ ರೈಲುಗಳ ಸಂಚಾರದ ಅವಧಿಯನ್ನು ಹೆಚ್ಚಿಸಬೇಕು ಎಂದು ಜನರು ಒತ್ತಾಯಿಸಿದ್ದರು ಇದೇ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next