Advertisement

ನೀಟ್‌ ನೋಂದಣಿ ದಿನಾಂಕ ವಿಸ್ತರಣೆ

11:32 PM Jun 26, 2019 | Lakshmi GovindaRaj |

ಬೆಂಗಳೂರು: ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮತ್ತು ಕರ್ನಾಟಕದ ಅಭ್ಯರ್ಥಿಗಳಿಗೆ ಆಯುಷ್‌ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜೂನ್‌ 28ರವರೆಗೆ ಅಂತಿಮ ಅವಕಾಶ ನೀಡಲಾಗಿದೆ.

Advertisement

ಜೂನ್‌ 28ರ ಸಂಜೆ 5.30ರ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಕೊನೆಯ ಅವಕಾಶವಾಗಿದೆ. ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಿಇಟಿ-2019ರ ದಾಖಲಾತಿ ಪರಿಶೀಲನೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸೇರಿದಂತೆ ನೀಟ್‌ 2019ರಲ್ಲಿ ತೇರ್ಗಡೆಯಾಗಿರುವ ಎಲ್ಲ ಅರ್ಹ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ, ಆಯುಷ್‌ ಕೋರ್ಸ್‌ಗಳ ಪ್ರವೇಶಕ್ಕೆ ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ನೀಟ್‌ ನೋಂದಣಿ ಮಾಡಿಕೊಳ್ಳಬೇಕು. ಮಾಹಿತಿಗೆ ವೆಬ್‌ಸೈಟ್‌ kea.kar.inc.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next