Advertisement

ಪ. ವರ್ಗದ ವಿದ್ಯಾರ್ಥಿಗಳ ದಾಖಲಾತಿ ಅವಧಿ ವಿಸ್ತರಣೆ

12:36 AM May 31, 2023 | Team Udayavani |

ಮಂಗಳೂರು: ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲಿಸಲು ಜೂ. 7ರ ವರೆಗೆ ಅವಧಿ ವಿಸ್ತರಿಸಲಾಗಿದೆ.

Advertisement

ಮಂಗಳೂರು ನಗರದ ಕೊಡಿಯಾಲಬೈಲ್‌ನ ಶಾರದಾ ವಿದ್ಯಾಲಯ, ಬಂಟ್ವಾಳ ತಾಲೂಕಿನ ಪುಣ್ಯಕೋಟಿ ನಗರದಲ್ಲಿರುವ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯಲ್ಲಿರುವ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿಟ್ಲದ ಬಸವನಗುಡಿಯಲ್ಲಿರುವ ವಿಟ್ಲ ಜೆಸಿಸ್‌ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಎಸ್‌.ವಿ.ಎಸ್‌. ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿರುವ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಹಳೆಕೋಟೆಯಲ್ಲಿರುವ ವಾಣಿ ಇಂಗ್ಲಿಷ್‌ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿರುವ ಸೇಕ್ರೆಡ್‌ ಹಾಟ್ಸ್‌ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗಕ್ಕೆ ದಾಖಲು ಮಾಡಿಕೊಳ್ಳಲಾಗುವುದು.

ಅರ್ಹತೆ, ಷರತ್ತುಗಳು
ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂ.ಗಳಿಗೆ ಮೀರಿರಬಾರದು. (2022-23ನೇ ಸಾಲಿನ ಆದಾಯ ಪ್ರಮಾಣ ಪತ್ರ ಲಗತ್ತೀಕರಿಸಬೇಕು), 2 ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ. 5ನೇ ತರಗತಿಯಲ್ಲಿ ಶೇ. 60 ಅಂಕ ಪಡೆದಿರಬೇಕು. ದಕ್ಷಿಣಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಒಂದು ಕುಟುಂಬದಲ್ಲಿ ಎರಡು ಮಕ್ಕಳಿಗೆ ಮಾತ್ರ ಅಂದರೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿಗೆ ಅವಕಾಶ ಕಲ್ಪಿಸುವುದು. ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಅವಕಾಶ ನೀಡಲಾಗುವುದು.

ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯಾ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಪರಿಶೀಲಿ ಸಿದ ಅನಂತರ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ. ಕಚೇರಿ, ಅಶೋಕನಗರ ಅಂಚೆ, ಮಂಗಳೂರು-575006 ಇಲ್ಲಿಗೆ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next