Advertisement

ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಸೇವಾವಧಿ ವಿಸ್ತರಣೆ

07:26 PM Aug 05, 2022 | Team Udayavani |

ನವದೆಹಲಿ: ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಅವರ ಅಧಿಕಾರಾವಧಿಯನ್ನು ಒಂದು ವರ್ಷದ ಕಾಲ ವಿಸ್ತರಿಸಲಾಗಿದೆ. ರಾಜೀವ್‌ ಅವರಿಗೆ ಎರಡನೇ ಬಾರಿಗೆ ಅಧಿಕಾರಾವಧಿ ವಿಸ್ತರಣೆಯಾದಂತಾಗಿದೆ.

Advertisement

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ರಾಜೀವ್‌ ಅವರನ್ನು 2019ರಲ್ಲಿ ಸಂಪುಟ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಎರಡು ವರ್ಷಗಳ ಕಾಲಾವಧಿಗೆ ನೇಮಕವಾಗಿದ್ದ ಅವರಿಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಅಧಿಕಾರಾವಧಿಯನ್ನು ಒಂದು ವರ್ಷದ ಮಟ್ಟಿಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಸಂಪುಟದ ನೇಮಕಾತಿ ಸಮಿತಿಯ ಒಪ್ಪಿಗೆ ಮೇರಿಗೆ ಮತ್ತೂಮ್ಮೆ ಅಧಿಕಾರಾವಧಿಯನ್ನು ವಿಸ್ತರಣೆ ಮಾಡಲಾಗಿದೆ.

1982ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ರಾಜೀವ್‌ ಅವರು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019 ಅನ್ನು ಜಾರಿಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next