Advertisement

“ಮಲೇರಿಯಾ, ಡೆಂಗ್ಯೂ ನಿಯಂತ್ರಣಕ್ಕೆ ವ್ಯಾಪಕ ಕ್ರಮ’

11:32 PM Jul 13, 2019 | Sriram |

ಮಹಾನಗರ: ಮಲೇರಿಯಾ, ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಲ್ಯು. ಕಾರ್ಮಿಕರಿಂದ ನಿರಂತರ ಸಮೀಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಆರ್‌. ಸೆಲ್ವಮಣಿ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು.

Advertisement

ಅವರು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌.ವಿ.ಬಿ.ಸಿ.ಪಿ. ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಪ್ರಯುಕ್ತ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ಸುತ್ತಮುತ್ತ ಸ್ವತ್ಛತೆ ಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಗುಜರಿ ಅಂಗಡಿಗಳ ಪ್ರದೇಶದಲ್ಲಿ ಸ್ವತ್ಛತೆಯನ್ನು ಕಾಪಾಡಿಕೊಳ್ಳಬೇಕು. ಸ್ವತ್ಛತೆ ಕಾಯ್ದುಕೊಳ್ಳದವರಿಗೆ ದಂಡ ವಿಧಿಸಬೇಕು. ಅತೀ ಹೆಚ್ಚು ಮಲೇರಿಯಾ ಹಾಗೂ ಡೆಂಗ್ಯೂ ವರದಿಯಾಗಿರುವ ಪ್ರದೇಶಗಳಿಗಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳು ನಿರಂತರ ಭೇಟಿ ನೀಡಿ ಅದರ ನಿಯಂತ್ರಣದ ಬಗ್ಗೆ ಕ್ರಮಕೈಗೊಳ್ಳಬೇಕು ಎಂದವರು ಸೂಚಿಸಿದರು.

ಜಿಲ್ಲಾ ಆರೋಗ್ಯಾಗಾಧಿಕಾರಿ ಡಾ| ರಾಮಕೃಷ್ಣ ರಾವ್‌, ಕುಟುಂಬ ಕಲ್ಯಾಣ ಅಧಿಕಾರಿ ಡಾ| ಸಿಕಂದರ್‌ ಪಾಷಾ, ಡಿಡಿಪಿಐ ವೈ. ಶಿವರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next