Advertisement
ಮೂರುಸಾವಿರಮಠದ ಸಭಾಂಗಣದಲ್ಲಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕ ಆಯೋಜಿಸಿದ್ದ ಪಂಡಿತ್ ದೀನದಯಾಳ ಉಪಾಧ್ಯಾಯ ವಿಸ್ತಾರಕರ ಕಾರ್ಯಾಗಾರಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 150ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂದರು.
Related Articles
Advertisement
ಕಾಂಗ್ರೆಸ್‌ಗೆ ಶೆಟ್ಟರ ಸವಾಲು: ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ 84ಲಕ್ಷ ಜನರ ಸದಸ್ಯತ್ವ ಮಾಡಿದೆ. ಕಾಂಗ್ರೆಸ್ ಕೂಡ ಸದಸ್ಯತ್ವ ಅಭಿಯಾನ ಮಾಡಿದ್ದು, ಎಷ್ಟು ಜನರ ಸದಸ್ಯತ್ವ ಮಾಡಿದೆ ಎಂಬುದನ್ನು ಬಹಿರಂಗಪಡಿಸುವಂತೆ ಪಕ್ಷದ ಮುಖಂಡರಿಗೆ ಸವಾಲು ಹಾಕುತ್ತೇನೆ.
ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಸದಸ್ಯತ್ವ 1-2 ಲಕ್ಷ ಕೂಡ ದಾಟಿರಲಿಕ್ಕಿಲ್ಲ ಎಂದು ಅಭಿಪ್ರಾಯಪಟ್ಟರು. ಸಿಎಂ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಅಥಣಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಬಗ್ಗೆ ವೈಯಕ್ತಿಕವಾಗಿ ಕೆಳಮಟ್ಟಕ್ಕಿಳಿದು ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಹತಾಶರಾಗಿರುವುದಕ್ಕೆ ಸಾಕ್ಷಿ.
ಲಕ್ಷ್ಮಣ ಸವದಿ ಕೂಡ ಸಿದ್ದರಾಮಯ್ಯಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು. ಬಿಜೆಪಿ ದೇಶದಲ್ಲಿ 11 ಕೋಟಿಗೂ ಹೆಚ್ಚು ಸದಸ್ಯತ್ವ ಹೊಂದಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷವಾಗಿ ದಾಖಲೆ ನಿರ್ಮಿಸಿದೆ. ಬಿಜೆಪಿ ವ್ಯಕ್ತಿಗಳನ್ನು ಅವಲಂಬಿಸಿಲ್ಲ ಕಾರ್ಯಕರ್ತರನ್ನು ಅವಲಂಬಿಸುತ್ತ ಬೆಳೆದ ಪಕ್ಷವಾಗಿದೆ ಎಂದರು. ವಿಸ್ತಾರಕರು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು.
ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ವಿಳಾಸ ಬದಲಾವಣೆಯಿದ್ದರೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ನಾಗೇಶ ಕಲುºರ್ಗಿ ಪ್ರಾಸ್ತಾವಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಮುಖಂಡರಾದ ಮಾ. ನಾಗರಾಜ, ಮಹೇಶ ಟೆಂಗಿನಕಾಯಿ, ಶಂಕ್ರಪ್ಪ ಬಿಜವಾಡ, ಲಿಂಗರಾಜ ಪಾಟೀಲ, ರಾಜು ಜರತಾರಘರ, ಮಹೇಂದ್ರ ಕೌತಾಳ, ರಂಗಾ ಬದ್ದಿ, ಲಕ್ಷ್ಮಣ ಬೀಳಗಿ, ತಿಪ್ಪಣ್ಣ ಮಜ್ಜಗಿ ವೇದಿಕೆ ಮೇಲಿದ್ದರು.