Advertisement

ನುಡಿದಂತೆ ನಡೆದ ಕಾಂಗ್ರೆಸ್‌ ಸರಕಾರಕ್ಕೆ ವ್ಯಾಪಕ ಬೆಂಬಲ

03:39 PM Feb 25, 2018 | |

ಬಸವನಬಾಗೇವಾಡಿ: ನುಡಿದಂತೆ ನಡೆದ ಕಾಂಗ್ರೆಸ್‌ ಸರಕಾರಕ್ಕೆ ರಾಜ್ಯವ್ಯಾಪಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. 2018ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಕರ್ನಾಟಕ ನಗರ ನೀರು ಸರಬುರಾಜು ಮತ್ತು ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಶಿವಾನಂದ ಪಾಟೀಲ ಹೇಳಿದರು.

Advertisement

ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ ನಡೆಯುವ ಜನಾಶೀರ್ವಾದ ಯಾತ್ರೆ ಸಿದ್ಧತೆ ಕುರಿತು ಚರ್ಚಿಸಲು ಕರೆಯಲಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರಕಾರ ಅನೇಕ ಜನಪರ ಯೋಜನೆಗಳನ್ನು
ಜಾರಿಗೆ ತಂದು 5 ವರ್ಷ ಉತ್ತಮ ಆಡಳಿತ ನಡೆಸಿರುವುದರಿಂದ ಜನ ಮಾನಸದಲ್ಲಿ ಉಳಿದಂತಾಗಿದೆ. ಬಸವನಬಾಗೇವಾಡಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಜಿಲ್ಲೆಯಲ್ಲಿ ಮಾದರಿಯಾಗಿದೆ.

ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ. ಕಾರ್ಯಕರ್ತರು ರಾಜ್ಯದ ಕಾಂಗ್ರೆಸ್‌ ಸರಕಾರದ ಅಭಿವೃದ್ಧಿ ಕಾರ್ಯ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಬಸವಣ್ಣನವರ ಚಿಂತನೆ ಆಧಾರದ ಮೇಲೆ ಸಮಾಜದ ಎಲ್ಲ ವರ್ಗದವರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಸರಕಾರ ಯೋಜನೆಗಳನ್ನು ಜಾರಿಗೆ ತಂದಿದೆ. ಅಭಿವೃದ್ಧಿ ಕಾರ್ಯಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು. 

Advertisement

ತಾಲೂಕಿನ ಮುಳವಾಡ ಗ್ರಾಮದ ಮಲ್ಲಿಕಾರ್ಜುನ ಪ್ರೌಢ ಶಾಲಾ ಆವರಣದಲ್ಲಿ ಫೆ. 25ರಂದು ಮಧ್ಯಾಹ್ನ 12ಕ್ಕೆ ಹಮ್ಮಿಕೊಂಡಿರುವ ಜನಾಶೀರ್ವಾದ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ , ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯದ ಮುಖಂಡರು, ಸಚಿವರು ಭಾಗವಹಿಸುವ ಮೂಲಕ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲಿದ್ದಾರೆ.

ಮುಳವಾಡ ಗ್ರಾಮದ ಜನಾಶೀರ್ವಾದ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸುವ ಮೂಲಕ ಪಕ್ಷಕ್ಕೆ ಬಲ
ತುಂಬವಂತಹ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ
ಮಾಡಿದರು. 

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವಿ ರಾಠೊಡ, ಶಂಕರಗೌಡ ಬಿರಾದಾರ, ಸುರೇಶಗೌಡ ಪಾಟೀಲ, ಕಾಶೀನಾಥ ರಾಠೊಡ, ರಾಜು ಫಿರಂಗಿ ಮಾತನಾಡಿದರು.  ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮಹಿಳಾ ಅಧ್ಯಕ್ಷೆ ರುಕ್ಮಿಣಿ ರಾಠೊಡ, ಸಬರಾಜ ಕೋಟಿ, ಮುರುಗೇಶ ನಾಯ್ಕೋಡಿ, ಬಸವರಾಜ ಗೊಳಸಂಗಿ, ಅಜೀಜ್‌ ಬಾಗವಾನ, ಉದಯ ಮಾಂಗಲೇಕರ, ಅನಿಲ ಪವಾರ, ಮಲ್ಲೇಶಿ ಕಡಕೋಳ, ಯಮನಪ್ಪ ನಾಯ್ಕೋಡಿ, ಅಪ್ಪಾಸಾಹೇಬ ಯರನಾಳ, ಪರುತಪ್ಪ ಕುಂಬಾರ, ನಿಸಾರ್‌ ಚೌಧರಿ, ಭರತ ಅಗರವಾಲ, ಸಂಗಮೇಶ ಓಲೇಕಾರ, ಜ್ಯೋತಿ ಕುಂಬಾರ, ಶೋಭಾ ಲಮಾಣಿ, ಶಾಂತಾಬಾಯಿ ಕುಂಬಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next