Advertisement
ಹಬ್ಬಕ್ಕೆ ನಗರದಿಂದ ರಾಜ್ಯದ ವಿವಿಧೆಡೆ ಮತ್ತು ಅಂತರರಾಜ್ಯಗಳಿಗೆ ತೆರಳುವವರಿಗಾಗಿ ಈ ಹೆಚ್ಚುವರಿ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾಮಾನ್ಯ, ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ, ಐರಾವತ ಕ್ಲಬ್ ಕ್ಲಾಸ್ ಹಾಗೂ ಡೈಮಂಡ್ ಕ್ಲಾಸ್ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಈ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಟಿಟಿಎಂಸಿ ಬಸ್ ನಿಲ್ದಾಣದಿಂದ ಆಚರಣೆ
ಮಾಡಲಿವೆ. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಈ ಹೆಚ್ಚುವರಿ ಬಸ್‌ಗಳ ಸೇವೆ ಇರಲಿದೆ.
ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಕೆಂಗೇರಿ ಉಪನಗರ ನಗರದ ಮತ್ತಿತರ ಸ್ಥಳಗಳಿಂದ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು,
ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ,ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ,ಮುಂಬೈ, ಎರ್ನಾಕುಲಂ, ಪಾಲ್ಗಾಟ್, ತಿರುವನಂತಪುರ ಸೇರಿದಂತೆ ಮತ್ತಿತರ ನೆರೆ ರಾಜ್ಯಗಳ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
Related Articles
Advertisement