Advertisement
ಗುಜರಾತ್, ರಾಜಸ್ಥಾನದಲ್ಲಿ ಕಳೆದ 5 ದಿನಗಳಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿ ಘಟನೆಗಳಿಂದ ಗುಜರಾತ್‌ನಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಆಗಸ್ಟ್ ತಿಂಗಳಲ್ಲಿ ಗುಜರಾತ್ ಶೇ.179ರಷ್ಟು ಹೆಚ್ಚುವರಿ ಮಳೆ ಕಂಡರೆ, ರಾಜಸ್ಥಾನದಲ್ಲಿ ಶೇ.33ರಷ್ಟು ಹೆಚ್ಚು ಮಳೆ ಬಿದ್ದಿದೆ. ಬುಧವಾರದಿಂದ 3 ದಿನಗಳ ಕಾಲ ಇಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಲ್ಲಿ ಮಾತ್ರವಲ್ಲದೇ, ಒಡಿಶಾ, ಪಶ್ಚಿಮ ಬಂಗಾಲ, ಜಾರ್ಖಂಡ್, ಛತ್ತೀಸ್‌ಗಢ, ಮಧ್ಯಪ್ರದೇಶವೂ ಭಾರೀ ಮಳೆಗೆ ಸಾಕ್ಷಿಯಾಗಲಿವೆ ಎಂದಿದೆ.
ಮಳೆಯಬ್ಬರದಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರಾಖಂಡದಲ್ಲಿ ಉಂಟಾದ ಭೂಕುಸಿತಕ್ಕೆ ಮಂಗಳ ವಾರ ಐವರು ಬಲಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಎರಡು ಕಡೆ ಭೂಕುಸಿತ ಸಂಭ ವಿಸಿದೆ. ಒಂದು ಕಡೆ ಒಂದೇ ಕುಟುಂಬದ ಮೂವರು, ಮತ್ತೂಂದು ಕಡೆ ಒಬ್ಬರು ಸಾವಿಗೀಡಾಗಿದ್ದಾರೆ. ಜಾನುವಾರುಗಳನ್ನು ಮೇಯಿಸಲು ತೆರಳಿದ್ದಾಗ ಈ ಘಟನೆ ನಡೆದ ಕಾರಣ, ಹಲವು ಜಾನುವಾರುಗಳು ಕೂಡ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ರಾಂಬಾನ್ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಕಡೆ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನೇ ಬಂದ್ ಮಾಡಲಾಗಿದೆ. ಹೀಗಾಗಿ, ದೇಶದ ಇತರೆ ಭಾಗಗಳನ್ನು ಕಾಶ್ಮೀರಕ್ಕೆ ಸಂಪರ್ಕಿಸುವ ರಸ್ತೆಯೇ ಬಂದ್ ಆದಂತಾಗಿದೆ. ಇನ್ನು, ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ ಉಂಟಾಗಿ, ಕಿರಿಯ ಎಂಜಿನಿಯರ್ ಮೃತ ಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.