Advertisement

ಬೆಂಗಳೂರು ರೈಲು ನಿಲ್ದಾಣದಲ್ಲಿ ಮುಖ ಗುರುತಿಸುವ ವ್ಯವಸ್ಥೆ

01:16 AM Jan 09, 2020 | mahesh |

ಹೊಸದಿಲ್ಲಿ: ಬೆಂಗಳೂರು, ಮನ್ಮಾಡ್‌, ಭುಸಾವಲ್‌ ರೈಲು ನಿಲ್ದಾಣಗಳಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿ ಫಿಶಿಯಲ್‌ ಇಂಟೆಲಿಜೆನ್ಸ್‌) ನೆರವಿನಿಂದ ಮುಖ ಗುರುತಿಸುವ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ.

Advertisement

ಅಪರಾಧಿಗಳನ್ನು ಕ್ಷಿಪ್ರವಾಗಿ ಗುರುತಿಸುವ ನಿಟ್ಟಿನಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲು ರೈಲ್ವೇ ರಕ್ಷಣಾ ಪಡೆ ನಿರ್ಧರಿಸಿದೆ. ಈ ವ್ಯವಸ್ಥೆಯನ್ನು ತಾನು ಈಗಾಗಲೇ ಹೊಂದಿರುವ ಅಪರಾಧ ಮತ್ತು ಅಪರಾಧ ಪ್ರಕರಣಗಳ ಮೇಲೆ ನಿಗಾ ಇರಿಸುವ ವ್ಯವಸ್ಥೆಗೆ ಲಿಂಕ್‌ ಮಾಡಲು ಮುಂದಾಗಿದೆ. ರೈಲು ನಿಲ್ದಾಣಗಳಲ್ಲಿ ಅಪರಾಧ ಕೃತ್ಯಗಳನ್ನು ನಡೆಸಲು ಠಳಾಯಿಸುತ್ತಿರುವವರ ಮೇಲೆ ಕಣ್ಣಿಡಲು ಈ ತಂತ್ರಜ್ಞಾನ ನೆರವಾಗಲಿದೆ. ಸದ್ಯ ಈ ವ್ಯವಸ್ಥೆಯನ್ನು 3 ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next