Advertisement

SSLC Exam; “ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಸಾಧಕರಾಗಿ’

12:28 AM Mar 07, 2024 | Team Udayavani |

ಮಂಗಳೂರು: ರಾಜ್ಯದ್ಯಂತ ಮಾ. 25ರಿಂದ ಎ. 6ರ ವರೆಗೆ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ನೂರರಷ್ಟು ಶ್ರಮಪಟ್ಟ ಓದುವ ಮೂಲಕ ಹೆಚ್ಚು ಅಂಕ ಗಳಿಸಿ ಚಾಂಪಿಯ ನ್‌ಗಳಾಗುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಕರೆ ನೀಡಿದರು.

Advertisement

ಪರೀಕ್ಷೆ ಬರೆಯಲು ಸಿದ್ಧ ವಾಗಿರುವ ಜಿಲ್ಲೆಯ ಎಲ್ಲ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಅವರು ಬುಧವಾರ ವೀಡಿಯೋ ಸಂವಾದ ನಡೆಸಿ ಶುಭ ಹಾರೈಸಿದರು.

ಎಸೆಸೆಲ್ಸಿಯಂತಹ ಮಹತ್ವದ ಪರೀಕ್ಷೆ ಬರೆಯಲು ವಿದ್ಯಾರ್ಥಿ ಗಳು ಉತ್ತಮ ಮನಸ್ಥಿತಿಯನ್ನು ಇಟ್ಟುಕೊಳ್ಳಬೇಕು. ಇದೇ ಮೊದಲ ಬಾರಿಗೆ ನಿಮ್ಮ ಶಾಲೆ ದಾಟಿ ನಿಮ್ಮನ್ನು ನೀವೇ ಗುರುತಿಸಿ ಕೊಳ್ಳುವ ಪರೀಕ್ಷೆಯನ್ನು ಎದುರಿ ಸಲು ಸಜ್ಜಾಗುತ್ತಿದ್ದೀರಿ. ಆ ಗುರಿ ಯನ್ನು ಸಾಧಿಸಲು ಮಾನಸಿಕ ಸ್ಥಿತಿ ಉತ್ತಮವಿರಬೇಕು. ಶಿಸ್ತು, ಆತ್ಮವಿಶ್ವಾಸ ಅತ್ಯಂತ ಮುಖ್ಯ. ಯಾವುದೇ ಕಾರಣಕ್ಕೂ ಇವುಗಳಿಂದ ವಿಚಲಿತರಾಗಬಾರದು. ಶಿಸ್ತಿನ ಸಮಯ ಪಾಲನೆಯಿಂದ ಹೆಚ್ಚು ಅಂಕ ಗಳಿಸಲು ಸಾಧ್ಯ. ದ.ಕ. ಜಿಲ್ಲೆ ಶೈಕ್ಷಣಿಕವಾಗಿ ಮುಂದುವರೆದಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆಯೊಂದಿಗೆ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.

ಜಿಲ್ಲೆಯ ಹಲವು ಶಾಲೆಗಳ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆ, ಸಂಶಯಗಳನ್ನು ಪರಿಹರಿಸಿಕೊಂಡರು.

ಮಕ್ಕಳೇ ಹೀಗೆ ಮಾಡಿ…
80 ಅಂಕಗಳ ಪರೀಕ್ಷೆಯಲ್ಲಿ ಮೊದಲ 10 ನಿಮಿಷ ಪ್ರಶ್ನೆ ಪತ್ರಿಕೆಯನ್ನು ಕೂಲಂಕಷವಾಗಿ ಓದಿ ಅರ್ಥಮಾಡಿಕೊಳ್ಳಬೇಕು. ಕೊನೆಯ 10 ನಿಮಿಷವನ್ನು ಬರೆದಿರುವ ಉತ್ತರಗಳನ್ನು ಪರೀಕ್ಷಿಸಿಕೊಳ್ಳಲು ಮೀಸಲಿರಿಸಿಕೊಳ್ಳಬೇಕು. ಈ ಮಧ್ಯದಲ್ಲಿ ಸಿಗುವ ವೇಳೆಯನ್ನು ಎರಡು, ಐದು ಅಥವಾ ಇತರ ಅಂಕಗಳಿಗೆ ಎಷ್ಟು ಪ್ರಮಾಣದಲ್ಲಿ ಬರೆಯಲು ಕಾಲಾವಕಾಶ ನೀಡಬೇಕು ಎನ್ನುವ ಲೆಕ್ಕಾಚಾರ ಹಾಕಿ ಕೊಳ್ಳಬೇಕು. ನೋಡಿದ ಕೂಡಲೇ ಬರೆಯು ವುದಕ್ಕಿಂತ 10 ನಿಮಿಷ ಪ್ರಶ್ನೆ ಪತ್ರಿಕೆ ಓದಿ ಅನಂತರವೇ ಸಮಯ ಅವಕಾಶವನ್ನು ಹೊಂ ದಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next