Advertisement

ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ

04:12 PM Jan 14, 2020 | Suhan S |

ದೇವನಹಳ್ಳಿ : ಪರೀಕ್ಷಾ ಭಯ ಹೋಗಲಾಡಿಸಲು ಕಾರ್ಯಗಾರಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಕಾರ್ಯಗಾರಗಳ ಸದುಪಯೋಗಪಡಿಸಿಕೊಂಡು ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸುವಂತೆ ಜಿಪಂ ಅಧ್ಯಕ್ಷೆ ಜಯಮ್ಮ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Advertisement

ತಾಲೂಕಿನ ಬೊಮ್ಮವಾರದ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿರ್ಪಡಿಸಿದ್ದ 2019-20 ನೇ ಸಾಲಿನ ವಸತಿ ಶಾಲೆ ವಿದ್ಯಾರ್ಥಿಗಳಿಗಾಗಿ ಎಸ್ಸೆಸ್ಸೆಲ್ಸಿ ಮಾರ್ಗದರ್ಶಿ ಕಮ್ಮಟ ಜಿಲ್ಲಾ ಮಟ್ಟದ ಕಾರ್ಯಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಗಣಿತ, ಸಮಾಜ-ವಿಜ್ಞಾನ, ವಿಜ್ಞಾನ ಹಾಗು ವಿಷಯ ಸಂಪನ್ಮೂಲ ಶಿಕ್ಷಕರಿಂದ ವಿಶೇಷ ತರಬೇತಿ ನೀಡಲಾಯಿತು. ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಎಲ್ಲರ ನಿರೀಕ್ಷೆಯಂತೆ ಅತ್ಯುತ್ತಮವಾಗಿ ಬರುವಂತೆ ಶಿಕ್ಷಕರು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ ಮಂಜುನಾಥ್‌ ಮಾತನಾಡಿ ಎಸ್ಸೆಸ್ಸೆಲ್ಸಿ ಮಕ್ಕಳು ನಿರಂತರ ಅಭ್ಯಾಸ ಮಾಡುವುದರ ಮೂಲಕ ಪರೀಕ್ಷಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆ ಯುವುದರ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು. ಪ್ರತಿಯೊಂದು ವಿಷಯವನ್ನು ಅರ್ಥ ಮಾಡಿಕೊಂಡು ಓದಿದರೆ ಪರೀಕ್ಷೆಯಲ್ಲಿ ಬರೆಯಲು ಅನುಕೂಲವಾಗುತ್ತದೆ. ಪ್ರತಿ ವಿದ್ಯಾರ್ಥಿ ಯಲ್ಲೂ ಒಂದೊಂದು ಪ್ರತಿಭೆ ಇದ್ದು, ಅದನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು ಎಂದರು.

ವಕೀಲ ಡಾ.ಲಕ್ಷ್ಮೀನಾರಾಯಣ ಪ್ರಾಂಶುಪಾಲರು, ಶಿಕ್ಷಕರು, ವಾರ್ಡನ್‌ ಗಳು, ವಿದ್ಯಾರ್ಥಿನಿಲಯಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next