ನವದೆಹಲಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಭಾರತದಲ್ಲಿ ತನ್ನ ಕಾರ್ಯವೈಖರಿಯಲ್ಲಿ ಪಕ್ಷಪಾತ ತೋರುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ನ ಲೇಖನವನ್ನು ಉಲ್ಲೇಖಿಸಿ “ಬಿಜೆಪಿ ಮತ್ತು ಆರ್‌ಎಸ್‌ಎಸ್ ಭಾರತದಲ್ಲಿ ಫೇಸ್‌ಬುಕ್ ಮತ್ತು ವಾಟ್ಸಾಪ್ ಅನ್ನು ನಿಯಂತ್ರಿಸುತ್ತಿದೆ. ಮಾತ್ರವಲ್ಲದೆ ಅದರ ಮೂಲಕ ನಕಲಿ ಸುದ್ದಿ ಮತ್ತು ದ್ವೇಷವನ್ನು ಹರಡಿ, ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದೆ. ಕೊನೆಗೂ ಅಮೆರಿಕಾದ ಮಾಧ್ಯಮವೊಂದು ಫೇಸ್‌ಬುಕ್ ನ ಕುರಿತಾದ ಸತ್ಯವೊಂದನ್ನು ಹೊರತಂದಿದೆ ಎಂದು ಆರೋಪ ಮಾಡಿದ್ದರು.
ಇದಕ್ಕೆ ರವಿಶಂಕರ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, “ತಮ್ಮ ಪಕ್ಷದಲ್ಲಿಯೂ ಪ್ರಭಾವ ಬೀರಲು ಸಾಧ್ಯವಾಗದವರು ಮಾತ್ರವಲ್ಲದೆ ಸೋತವರು ಇಡೀ ಜಗತ್ತನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಿಯಂತ್ರಿಸುತ್ತಿದೆ ಎಂದು ಹೇಳುತ್ತಲೇ ಇರುತ್ತಾರೆ. ಚುನಾವಣೆಗೂ ಮುನ್ನ ಕೇಂಬ್ರಿಡ್ಜ್ ಅನಾಲಿಟಿಕಾ ಹಾಗೂ ಫೇಸ್ ಬುಕ್ ನ ಮಾಹಿತಿ ಸಂಗ್ರಹಿಸಿ ಸಿಕ್ಕಿ ಬಿದ್ದಿದ್ದೀರಿ. ಈಗ ನಮ್ಮನ್ನು ಪ್ರಶ್ನಿಸುತ್ತಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.
Related Articles
ಭಾರತದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಗಳು ಫೇಸ್‌ಬುಕ್ ನಿಯಂತ್ರಿಸುತ್ತಿವೆ ಎಂಬ ವಾದವೀಗ ಭಾರಿ ಚರ್ಚೆಯಲ್ಲಿದೆ ಹಾಗೂ ಬಿಜೆಪಿ- ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟಕ್ಕೂ ಕಾರಣವಾಗಿದೆ.