ನವದೆಹಲಿ: ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಂನ ಮಾತೃ ಸಂಸ್ಥೆ ಮೆಟಾದ ಭಾರತದ ಮುಖ್ಯಸ್ಥರ ಸ್ಥಾನಕ್ಕೆ ಅಜಿತ್ ಮೋಹನ್ ಗುರುವಾರ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.
Advertisement
ಔದ್ಯೋಗಿಕ ಜೀವನದಲ್ಲಿ ಬೇರೊಂದು ಅವಕಾಶವನ್ನು ಹುಡುಕಿಕೊಳ್ಳುವ ನಿಟ್ಟಿನಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೆಟಾ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಫೇಸ್‌ಬುಕ್, ವಾಟ್ಸ್‌ಆ್ಯಪ್, ಇನ್‌ಸ್ಟಾಗ್ರಾಂಗಳ ಬೆಳವಣಿಗೆಗೆ ಮೋಹನ್ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಕಂಪನಿ ಹೇಳಿಕೊಂಡಿದೆ.
ವರದಿಯ ಪ್ರಕಾರ ಅಜಿತ್ ಮೋಹನ್ ಸ್ನ್ಯಾಪ್ ಕಂಪೆನಿಗೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.