Advertisement

ಫೇಸ್‌ಬುಕ್‌, ವಾಟ್ಸ್‌ಅಪ್‌ನಲ್ಲಿ ಬೇಕಾಬಿಟ್ಟಿ ಬರೀಬೇಡಿ: ಪರಮೇಶ್ವರ್‌ 

03:45 AM Mar 24, 2017 | |

ಬೆಂಗಳೂರು: ವಾಟ್ಸ್‌ಅಪ್‌, ಫೇಸ್‌ಬುಕ್‌, ಯೂಟ್ಯೂಬ್‌, ಟ್ವೀಟರ್‌ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಬರವಣಿಗೆ ಹಾಕುವ, ಫೋಟೋ ಹಾಗೂ ವಿಡಿಯೋ ತುಣುಕುಗಳನ್ನು ಅಪ್‌ಲೋಡ್‌ ಮಾಡುವವರನ್ನು ಶಿಕ್ಷೆಗೊಳಪಡಿಸಲು ಕಾನೂನು ತರಲಾಗುವುದು ಈ ರೀತಿಯ ಪ್ರಕರಣಗಳನ್ನು ತಡೆಗಟ್ಟಲು ಈಗಿರುವ ಸೈಬರ್‌ ಕಾನೂನು ಸಮರ್ಥವಾಗಿ ಬಳಸಲಾಗುವುದು. 

Advertisement

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಕಲಬುರಗಿಯಲ್ಲಿ “ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಆ್ಯಂಡ್‌ ಟೆಕ್ನಿಕಲ್‌ ಸೆಲ್‌’ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಬೆಂಗಳೂರು ಮತ್ತು ಮೈಸೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಸೋಶಿಯಲ್‌ ಮೀಡಿಯಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆ ಇಲಾಖಾ ಮಟ್ಟದಲ್ಲಿ ಪರಿಶೀಲನೆಯಲ್ಲಿದೆ ಎಂದು ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next