Advertisement
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಟ್ರಾನ್ಸ್‌ಜೆಂಡರ್ ಹಾಗೂ ದಮನಿತ ಮಹಿಳೆಯರ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ, ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸಿಪಿಐ ಎಚ್.ಗುರುರಾಜ್ ಮಾತನಾಡಿ, ತುಂಗಭದ್ರಾ ಬಡಾವಣೆಯಿಂದ ಬಾಡಾ ಕ್ರಾಸ್‌ವರೆಗೂ ಮಂಗಳಮುಖಿಯರ ಹಾವಳಿ ತಡೆಗೆ ಹಲವು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಬೀದಿದೀಪ, ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕುತ್ತಿದ್ದಾರೆ. ಮಂಗಳಮುಖಿಯರನ್ನು ಪೊಲೀಸ್ ಠಾಣೆಗೆ ಕರೆಸಿ ಐಟಿಪಿ ಕಾಯ್ದೆಯಡಿ ಇರುವ ಕಾನೂನು ಕ್ರಮಗಳನ್ನು ತಿಳಿಸಿದ್ದೇವೆ. ಆದರೂ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬೀದಿದೀಪ ಹಾಗೂ ಸಿಸಿಕ್ಯಾಮೆರಾ ಅಳವಡಿಸಬೇಕು ಎಂದು ಮನವಿ ಮಾಡಿದರು.
ರಾತ್ರಿ 8 ಗಂಟೆ ನಂತರ ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆಗೂಡಿ ಗಸ್ತು ಬರಲಿದ್ದೇನೆ. ಯಾರೇ ಕಂಡುಬಂದರೂ ಮುಲಾಜಿಲ್ಲದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಪ್ರವೀಣ್ ನಾಯಕ್ ಮಾತನಾಡಿ, ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಅದೇ ವೃತ್ತಿಯಲ್ಲಿ ತೊಡಗಿಸಿಕೊಳ್ಳಬಾರದು. ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಭಳಕೆ ಮಾಡಿಕೊಳ್ಳಿ ಎಂದರು.
ಸಮುದಾಯದ ಮುಖಂಡರು ಮಾತನಾಡಿ, ನಮ್ಮ ಸಮುದಾಯದಲ್ಲೂ ಕೆಟ್ಟವರು, ಒಳ್ಳೆಯವರು ಇರುತ್ತಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡವರ ವಿರುದ್ಧ ಕ್ರಮಕ್ಕೆ ಪ್ರೋತ್ಸಾಹಿಸುತ್ತೇವೆ. ಸೆಕ್ಸ್ ವರ್ಕ್ ಹಾಗೂ ಭಿûಾಟನೆ ನಮ್ಮ ವೃತ್ತಿಯಾಗಿದ್ದು ಅದನ್ನು ತಡೆಯಬೇಡಿ ಎಂದು ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿದ್ದರು.
ಮಾದಕ ವಸ್ತು ಮಾರಾಟ ತಡೆಗೆ ಕ್ರಮ : ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಯ ಸುತ್ತಮುತ್ತಲ ಪ್ರದೇಶಗಳಲ್ಲಿ, ಪಾರ್ಕ್ಗಳಲ್ಲಿ, ವಿಶ್ರಾಂತಿ ಧಾಮಗಳಲ್ಲಿ ಹಾಗೂಜನಸಾಂದ್ರತೆಯಿರುವ ಪ್ರದೇಶಗಳಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆದೂರುಗಳು ಕೇಳಿಬರುತ್ತಿರುವ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿಗಳೊಂದಿಗೆ ಈಗಾಗಲೆಚರ್ಚಿಸಿದ್ದೇನೆ. ಮಾದಕ ವಸ್ತುಗಳ ಮಾರಾಟ ಜಾಲವನ್ನು ಹಿಡಿದು ಮಟ್ಟ ಹಾಕಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು. ಮಾದಕ ವಸ್ತುಗಳ ಜಾಲಹರಡದಂತೆ ಸೂಕ್ತ ಕಾರ್ಯಾಚರಣೆ ನಡೆಸುವಮೂಲಕ ಮಾದಕ ವಿಷ ವರ್ತುಲದಿಂದ ಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.