Advertisement
ಏ. 24 ರಂದು ಶಿವಮೊಗ್ಗದಲ್ಲಿಯೇ ನಡೆಯಲಿರುವ ಜಿಲ್ಲಾ ಭೋವಿ (ವಡ್ಡರ) ಸಮಾವೇಶ ಹಾಗೂ ಭೋವಿ ಭವನದ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಮೈದಾನದಲ್ಲಿ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಶ್ರೀಗಳು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Related Articles
Advertisement
ಕನಿಷ್ಠ 2 ಸಾವಿರ ಕೋಟಿ ರೂ. ಕೊಡಿ
ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲ. ಈಗಾಗಲೇ ನಾಲ್ಕೈದು ವರ್ಷಗಳೇ ಕಳೆದಿವೆ. ಆ ಕಾರಣ ಕೂಡಲೇ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಬೇಕಿದೆ. ಹಾಗೆಯೇ ಪರಿಶಿಷ್ಟ ಜಾತಿಯಲ್ಲಿ 101 ಪಂಗಡಗಳಿವೆ. ಅಷ್ಟು ಜಾತಿಗಳಿಗೂ ಸೇರಿ ಒಟ್ಟು 25 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಎತ್ತಿಡಲಾಗಿದೆ. ಆದರೆ ನಮಗೆ ಇದಕ್ಕಿಂತ ಮುಖ್ಯವಾಗಿ ಜನಸಂಖ್ಯೆಗೆ ತಕ್ಕಂತೆ ಅನುದಾನ ಮೀಸಲಿಟ್ಟರೆ ಒಳ್ಳೆಯದು. ಶೇ.15 ರಷ್ಟು ಭೋವಿ ಸಮಾಜವಿದೆ. ಈ ಸಮಾಜಕ್ಕೆ ಕನಿಷ್ಠ 1 ರಿಂದ 2 ಸಾವಿರ ಕೋಟಿ ರೂ. ಅನುದಾನ ನೀಡಬೇಕು. ಹಾಗೆಯೇ ರಾಜಕೀಯ ಪ್ರಾತಿನಿಧ್ಯ ಸಿಗಬೇಕು. ಅವೆಲ್ಲವನ್ನೂ ಸಮಾವೇಶದ ಮೂಲಕ ಒತ್ತಾಯಿಸಲಿದ್ದೇವೆ ಎಂದರು.
ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ಹೆಚ್ಚಾಗಿದೆ. ಈ ಕಾರಣಕ್ಕೆ ನಮ್ಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರಗಳು ಸರಿಯಾಗಿ ಸಿಗಬೇಕು. ಸರಿಯಾದ ಫಲಾನುಭವಿಯನ್ನು ಗುರುತಿಸಬೇಕು. ಕೆಪಿಎಸ್‌ಸಿಲ್ಲಿ ಸಮಾಜದ ಪ್ರತಿನಿಧಿ ಇರಬೇಕು ಎಂಬುದು ಸಹ ನಮ್ಮ ಬೇಡಿಕೆಯಲ್ಲೊಂದಾಗಿದೆ. ಜೊತೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಿದ್ದರಾಮೇಶ್ವರ ಅಧ್ಯಾಯನ ಪೀಠ ಆರಂಭಿಸಲು ಸರ್ಕಾರಕ್ಕೆ ಒತ್ತಾಯ ಮಾಡಲಿದ್ದೇವೆ ಎಂದರು.
ಏ.24 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೋವಿ ಭವನ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣ ಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದು, ಒಟ್ಟು 25 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಸ್ವಾಮೀಜಿ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎನ್. ರವಿಕುಮಾರ್, ಪಾಲಿಕೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಕೃಷ್ಣಪ್ಪ, ಲೋಕೇಶ್, ಹರ್ಷ ಭೋವಿ ಮೊದಲಾದವರು ಇದ್ದರು.