Advertisement

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

11:51 PM Sep 24, 2023 | Team Udayavani |

ಉಡುಪಿ: ಸಮಗ್ರ ಸಮೀಕ್ಷೆಯ ಮೂಲಕ ಜಿಲ್ಲೆಯಲ್ಲಿರುವ ಅಂಗವಿಕಲರು ಮತ್ತು ಹಿರಿಯ ನಾಗರಿಕರನ್ನು ಪತ್ತೆಹಚ್ಚಿ ಅವರಿಗೆ ಅಗತ್ಯವಿರುವ ಎಲ್ಲ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಸಂಸ್ಥೆಯ ಮೂಲಕ ಉಚಿತವಾಗಿ ವಿತರಿಸಲಾಗುವುದು ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

Advertisement

ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ರವಿವಾರ ಮಣಿಪಾಲದ ರಜತಾದ್ರಿಯಲ್ಲಿ ನಡೆದ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲರು ಮತ್ತು ಹಿರಿಯ ನಾಗರಿ ಕರ ನಿಖರ ಅಂಕಿ-ಅಂಶ ಇಲ್ಲದಿರುವ ಕಾರಣ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಸಾಧನ ಸಲಕರಣೆ ವಿತರಿಸಲಾಗುತ್ತಿದೆ. ಸಮಗ್ರ ಸಮೀಕ್ಷೆ ಮೂಲಕ ಆ ಸಮಸ್ಯೆಯನ್ನು ನಿವಾರಿಸಲಾಗುವುದು. ಪಿಡಿಒಗಳು ಮತ್ತು ಪಂಚಾಯತ್‌ ಕಾರ್ಯದರ್ಶಿಗಳ ಮೂಲಕ ಮನೆಮನೆ ಸಮೀಕ್ಷೆ ನಡೆಸಿ ನಿಖರ ಅಂಕಿ- ಅಂಶ ಸಂಗ್ರಹಿಸಿ ಅಗತ್ಯವಿರುವ ಸಲಕರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರುರಾಜ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್‌ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಎಡಿಸಿ ಮಮತಾ ದೇವಿ, ಕುಂದಾಪುರ ಎಸಿ ರಶ್ಮಿ, ಸಾಮಾಜಿಕ ನ್ಯಾಯ ಮತ್ತು ಸಬಲೀ ಕರಣ ಇಲಾಖೆ ಸ. ನಿರ್ದೇಶಕ ಗಿರಿರಾಜ್‌ ಪ್ರಸಾದ್‌ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ, ಜಿಲ್ಲಾ ನಿರೂಪಣಾಧಿಕಾರಿ ಕೃಷ್ಣಪ್ಪ, ವಿಕಲಚೇತನರ ಕಲ್ಯಾಣಾಧಿಕಾರಿ ರಾಮದಾಸ್‌ ಉಪಸ್ಥಿತರಿದ್ದರು.
ಅಲಿಂಕೋ ಸಂಸ್ಥೆಯ ಅಶೋಕ್‌ ಪಾಲ್‌ ಸ್ವಾಗತಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ನಿರ್ವಹಿಸಿದರು.

3 ಸಾವಿರ ಮಂದಿಗೆ ವಾಹನ: ಹೆಬ್ಬಾಳ್ಕರ್‌
ರಾಜ್ಯದಲ್ಲಿರುವ ಅಂಗವಿಕಲರಲ್ಲಿ 6,800 ಮಂದಿಗೆ ದೈನಂದಿನ ಚಟುವಟಿಕೆಗೆ ವಾಹನಗಳ ಆವಶ್ಯಕತೆಯಿದ್ದು, ಈ ವರ್ಷ ಮೊದಲ ಹಂತದಲ್ಲಿ 3 ಸಾವಿರ ಮಂದಿಗೆ 30 ಕೋ.ರೂ. ವೆಚ್ಚದಲ್ಲಿ ವಾಹನಗಳನ್ನು ವಿತರಿಸಲಾಗುವುದು. ಉಳಿದವರಿಗೆ ಮುಂದಿನ ವರ್ಷ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

Advertisement

ಜಿಲ್ಲೆಯಲ್ಲಿ ಪ್ರತೀ ತಿಂಗಳ 25ರಂದು ಜನತಾ ದರ್ಶನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಈ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಹೆಬ್ಬಾಳ್ಕರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next