Advertisement

ತಮಿಳುನಾಡು ಮಾದರಿಯಲ್ಲಿ ತಮಟೆ ಕಲಾವಿದರಿಗೆ ಸೌಲಭ್ಯ ಕಲ್ಪಿಸಲು ಹೋರಾಟ: ರವಿಶಂಕರ್

12:54 AM Sep 21, 2020 | Hari Prasad |

ಚಿಕ್ಕಬಳ್ಳಾಪುರ: ನೆರೆಯ ತಮಿಳುನಾಡು ಮಾದರಿಯಲ್ಲಿ ರಾಜ್ಯದ ತಮಟೆ ಕಲಾವಿದರಿಗೂ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ತಮಟೆ ಕಲಾವಿದರ ಒಕ್ಕೂಟದ ಅಧ್ಯಕ್ಷ ಆರ್.ರವಿಶಂಕರ್ ಆಗ್ರಹಿಸಿದರು.

Advertisement

ಜಿಲ್ಲೆಯ ಶಿಡ್ಲಘಟ್ಟ ನಗರದ ಪೂಜಮ್ಮದೇವಿ ಸಮುದಾಯ ಭವನದಲ್ಲಿ ನಡೆದ ಶಿಡ್ಲಘಟ್ಟ ತಾಲೂಕು ತಮಟೆ ಕಲಾವಿದರ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ನೆರೆಯ ತಮಿಳುನಾಡಿನಲ್ಲಿ ತಮಟೆ ಕಲಾವಿದರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಜೊತೆಗೆ ಕಾರ್ಯಕ್ರಮಗಳನ್ನು ನೆರವೇರಿಸಲು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ರೈಲು ಮತ್ತು ಬಸ್ಸಿನಲ್ಲಿ ಸಂಚರಿಸಲು ಉಚಿತವಾಗಿ ಟಿಕೇಟ್ ಸೌಲಭ್ಯ ಕಲ್ಪಿಸಲಾಗಿದೆ.

35 ವರ್ಷ ಹೊಂದಿರುವ ಕಲಾವಿದನ ಬಳಿ ಸೇವೆ ಸಲ್ಲಿಸುವ 10 ಮಂದಿ ಕಲಾವಿದರಿಗೆ ಪ್ರತಿ ಆರು ತಿಂಗಳಿಗೊಮ್ಮ ಸಮವಸ್ತ್ರ ಖರೀದಿಸಲು 30 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ ಅದಲ್ಲದೆ ಅವರ ಮಕ್ಕಳ ಶ್ಯೆಕ್ಷಣಿಕ ಅಭಿವೃದ್ದಿಗಾಗಿ ಶಾಲಾ ಶುಲ್ಕ,ಆರೋಗ್ಯ ರಕ್ಷಣೆಗೆ ನೆರವು ನೀಡುತ್ತಿದ್ದಾರೆ.

ಆದರೆ ನಮ್ಮ ರಾಜ್ಯದಲ್ಲಿ ತಮಟೆ ಕಲಾವಿದರಿಗೆ ಯಾವುದೇ ರೀತಿಯ ಅನುಕೂಲಗಳಿಲ್ಲ ಈ ನಿಟ್ಟಿನಲ್ಲಿ ಕಲಾವಿದರು ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಕರೆ ನೀಡಿದರು.

ಗುರುತಿನ ಚೀಟಿ ನೀಡಿ: ರಾಜ್ಯದಲ್ಲಿ ಅನೇಕ ಮಂದಿ ಕಲಾವಿದರು ನಿಸ್ವಾರ್ಥ ಮತ್ತು ಪ್ರಾಮಾಣಿಕತೆಯಿಂದ ವೃತ್ತಿಯನ್ನು ಪ್ರೀತಿಸಿ ಜೀವನ ನಡೆಸುತ್ತಿದ್ದಾರೆ ಅವರಿಗೆ ಸರ್ಕಾರಗಳಿಂದ ಯಾವುದೇ ಸೌಲಭ್ಯ ಲಭಿಸಿಲ್ಲ ಕನಿಷ್ಠ ಪಕ್ಷ ಕಲಾವಿದರಿಗೆ ಮೊದಲು ಗುರುತಿನ ಚೀಟಿ ನೀಡಿ ನೆರೆ ರಾಜ್ಯಗಳ ಮಾದರಿಯಲ್ಲಿ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಇಲ್ಲದಿದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

Advertisement

ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮಾತನಾಡಿ ರಾಜಕೀಯ ಸಮಾವೇಷಗಳು ಮತ್ತು ಧಾರ್ಮಿಕ ಸಭೆ ಸಮಾರಂಭಗಳನ್ನು ನಡೆಸಲು ತಮಟೆ ಕಲಾವಿದರ ಸೇವೆಯನ್ನು ಪಡೆದುಕೊಳ್ಳುತ್ತಾರೆ ಆದರೆ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಸರ್ಕಾರ ಮ್ತತು ರಾಜಕೀಯ ನಾಯಕರುಗಳು ಪೊಳ್ಳು ಭರವಸೆಗಳನ್ನು ನೀಡುತ್ತಾ ಕಾಲಾಹರಣ ಮಾಡುತ್ತಿದ್ದಾರೆ ಹಾಗಾಗಿ ತಮಟೆ ಕಲಾವಿಧರು ಗ್ರಾಮ ಪಂಚಾಯಿತಿ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೆ ಸಂಘಟಿತರಾಗಿ ಸೌಲಭ್ಯ ಪಡೆಯಲು ಹೋರಾಟ ನಡೆಸಬೇಕೆಂದು ಕರೆ ನೀಡಿದರು.

ರಾಜ್ಯ ತಮಟೆ ಕಲಾವಿದರ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಡಿ.ಮೂರ್ತಿ ಮಾತನಾಡಿ ಪ್ರತಿ ಹಳ್ಳಿಯಲ್ಲಿ ತಮಟೆ ಕಲಾವಿದರನ್ನು ಗುರುತಿಸಿ ಸಂಘಟನೆಯನ್ನು ಬಲಪಡಿಸಲು ನೂತನ ಪದಾಧಿಕಾರಿಗಳು ಶ್ರಮಿಸಬೇಕೆಂದರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ತಮಟೆ ಕಲಾವಿದ ನಾಡೋಜ ಪಿಂಡಪಾಪನಹಳ್ಳಿ ಮುನಿವೆಂಕಟಪ್ಪ, ತಮಟೆ ಕಲಾವಿದರ ಒಕ್ಕೂಟದ ಜಿಲ್ಲಾಧ್ಯಕ್ಷ ಆನಂದ್,ಉಪಾಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸುನೀಲ್,ನಗರಸಭಾ ಸದಸ್ಯ ಕೃಷ್ಣಮೂರ್ತಿ, ಕಲಾವಿದ ಈಧರೆ ಪ್ರಕಾಶ್, ತಾಲೂಕು ತಮಟೆ ಕಲಾವಿದರ ಒಕ್ಕೂಟದ ಹಂಡಿಗನಾಳ ಮಾದೇಶ್, ಇ-ತಿಮ್ಮಸಂದ್ರ ಕಿರಣ್, ಶಿಡ್ಲಘಟ್ಟ ನಗರದ ಮಂಜು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next