Advertisement

ವೈಫಲ್ಯ ಮರೆಮಾಚಲು ಗ್ರಾಮ ವಾಸ್ತವ್ಯ ನಾಟಕ

11:14 PM Jun 11, 2019 | Team Udayavani |

ಲಿಂಗಸುಗೂರು: “ಮೈತ್ರಿ ಸರ್ಕಾರದ ಒಂದು ವರ್ಷದಲ್ಲಿನ ದುರಾಡಳಿತ ಹಾಗೂ ವೈಫಲ್ಯಗಳನ್ನು ಮರೆಮಾಚಿ ಜನತೆಯ ಗಮನ ಬೇರೆಡೆ ಸೆಳೆಯಲು ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ನಾಟಕವಾಡುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಜನತೆ ಸಂಕಷ್ಟದಲ್ಲಿದ್ದಾರೆ. ಬರ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳಲು ನಾನಾ ಕಸರತ್ತು ಮಾಡುವುದರಲ್ಲೇ ವರ್ಷ ಕಳೆದಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಗ್ರಾಮ ವಾಸ್ತವ್ಯ ಮಾಡಬೇಕಾಗಿತ್ತು.

ಆದರೆ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಗ್ರಾಮ ಹಾಗೂ ಶಾಲಾ ವಾಸ್ತವ್ಯದ ನಾಟಕ ಶುರು ಮಾಡಿದ್ದಾರೆ ಎಂದರು. ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಜೇನುಗೂಡಿಗೆ ಕಲ್ಲು ಹೊಡೆದಂತೆ. ಇಬ್ಬರಿಗೆ ಸಚಿವ ಸ್ಥಾನ ನೀಡಿದರೆ ಮತ್ತೆ ನಾಲ್ವರಿಂದ ಭಿನ್ನಾಭಿಪ್ರಾಯ ಭುಗಿಲೆದ್ದು ಸರ್ಕಾರ ಯಾವ ಕ್ಷಣದಲ್ಲಾದರೂ ಪತನವಾಗಬಹುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next