Advertisement
ಉಮಾಶ್ರೀ ಅವರು ಉಸ್ತುವಾರಿ ಸಚಿವರಾದ ಬಳಿಕ ಜಿ.ಪಂ. ಸಭಾ ಭವನದಲ್ಲಿ ಮೊದಲ ಬಾರಿಗೆ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಡಿಯುವ ನೀರು ಪೂರೈಕೆ ಯೋಜನೆ ವಿಫಲಗೊಂಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಚಿವರ ಆಕ್ರೋಶಕ್ಕೆ ಶಾಸಕ ಜೆ.ಟಿ. ಪಾಟೀಲ, ಜಿ.ಪಂ. ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಕೂಡ ಧ್ವನಿಗೂಡಿಸಿದರು.
Related Articles
Advertisement
ಇದಕ್ಕೆ ಉತ್ತರಿಸಿದ ಸಚಿವೆ ಉಮಾಶ್ರೀ ಅವರು ಇಬ್ಬರು ಡಿಎಚ್‌ಓಗಳ ಮಧ್ಯೆ ಇರುವ ಮುಸಿಕಿನ ಗುದ್ದಾಟದಿಂದಾಗಿ ಇಲಾಖೆಯ ಕಾರ್ಯವೈಖ್ಯರಿ ಮೇಲೆ ಪರಿಣಾಮ ಬೀರುತ್ತಿದೆ. ಜನಸಾಮಾನ್ಯರಿಗೆ ತಪ್ಪು ಸಂದೇಶ ಹೋಗದಂತೆ ಅಧಿಕಾರಿಗಳು, ಪದೇ ಪದೇ ತಡೆಯಾಜ್ಞೆತಂದು ಒಮ್ಮೆ ಅವರು, ಇನ್ನೊಮ್ಮೆ ನೀವು ಅಧಿಕಾರ ವಹಿಸಿಕೊಂಡು ಗೊಂದಲಮೂಡಿಸಬೇಡಿ. ಹೀಗೆ ಮುಂದುವರೆದರೆ ಬೇರೆ ರೀತಿಯೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
116 ಕೋಟಿ ಪರಿಹಾರಕ್ಕೆ ಪ್ರಸ್ತಾವನೆ: ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ|ಪಿ. ರಮೇಶಕುಮಾರ ಮಾತನಾಡಿ, ಜಿಲ್ಲೆಯ ಆರು ತಾಲೂಕುಗಳನ್ನು ಸರಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಕೃಷಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಯಿಂದಆರು ತಾಲೂಕುಗಳ ಜಂಟಿ ಸಮೀಕ್ಷೆ ಕೈಗೊಂಡು ಸರಕಾರಕ್ಕೆ ವರದಿ ಕಳುಹಿಸಲಾಗಿದೆ. ಒಟ್ಟು 1.43 ಲಕ್ಷ ಹೆಕ್ಟೇರ್ ಹಾನಿಯಾಗಿದ್ದು, 165545 ರೈತರನ್ನು ಪರಿಹಾರ ತಂತ್ರಾಂಶದಲ್ಲಿ ಎಂಟ್ರಿ ಮಾಡಲಾಗಿದೆ.
116.25 ಕೋಟಿ ಇನ್‌ಪುಟ್ ಸಬ್ಸಿಡಿಬೇಕೆಂದು ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ ಎಂದು ತಿಳಿಸಿದರು.ಸಂಸದ ಪಿ.ಸಿ.ಗದ್ದಿಗೌಡರ, ಜಿ.ಪಂ. ಅಧ್ಯಕ್ಷೆ ವೀಣಾ ಕಾಶಪ್ಪನವರ, ವಿಧಾನಪರಿಷತ್ ಸದಸ್ಯರಾದ ಎಚ್.ಆರ್.ನಿರಾಣಿ, ಆರ್.ಬಿ.ತಿಮ್ಮಾಪೂರ, ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿ.ಪಂ ಸಿಇಒ ವಿಕಾಸ ಸುರಳಕರ, ಎಸ್.ಪಿ ರಿಷ್ಯಂತ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟೆ ಮುಂತಾದವರು ಉಪಸ್ಥಿತರಿದ್ದರು.