Advertisement

ಪರಿಸ್ಥಿತಿ ನಿರ್ವಹಿಸುವಲ್ಲಿ ಉಮಾಶ್ರೀ ವಿಫ‌ಲ

11:39 AM Mar 23, 2017 | Harsha Rao |

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ವಿಚಾರದಲ್ಲಿ ಪ್ರತಿಪಕ್ಷಗಳನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರ ಎಡವಿದೆ ಎಂದು ಕಾಂಗ್ರೆಸ್‌ ಶಾಸಕರು ಆಕ್ಷೇಪ ವ್ಯಕ್ತಪಡಿಸಿ¨ªಾರೆ. ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕರು, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಿದ್ದರೂ ಪ್ರತಿಪಕ್ಷಗಳು ಅವರ ಪ್ರತಿಭಟನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿವೆ. ಸರ್ಕಾರ ಅವರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ಸಚಿವೆ ಉಮಾಶ್ರೀ ಸಹ ವಿಫ‌ಲರಾಗಿ¨ªಾರೆ.

Advertisement

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಸಚಿವರು ಎಡವಿದ್ದಾರೆ. ಪ್ರತಿಭಟನೆ ಈ ಮಟ್ಟಕ್ಕೆ ಹೋಗಲು ಬಿಡಬಾರದಿತ್ತು ಎಂದು
ಅಸಮಾಧಾನ ಹೊರ ಹಾಕಿ¨ªಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಗೌರವಧನ ಹಾಗೂ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿಯುಳ್ಳ ಪತ್ರಿಕಾ ಜಾಹೀರಾತು ನೀಡುವಂತೆ ಶಾಸಕರು ಇದೇ ವೇಳೆ ಸರ್ಕಾರಕ್ಕೆ ಸಲಹೆ ನೀಡಿದರು ಎಂದು ತಿಳಿದು ಬಂದಿದೆ. ಈ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವೆ ಉಮಾಶ್ರೀ ಬೆಂಬಲಕ್ಕೆ ನಿಂತಿದ್ದು, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ವರ್ಷವೂ ಗೌರವಧನ ಹೆಚ್ಚಳ ಮಾಡಿದೆ. ಅವರು ಅಸ್ವಸ್ಥರಾದರೆ/ನಿಧನ ಹೊಂದಿದರೆ ಅವರಿಗೆ ನೀಡುವ ಸಹಾಯಧನವನ್ನು ಹೆಚ್ಚಿಸಿದೆ. ಹಿಂದಿನ
ಬಿಜೆಪಿ ಸರ್ಕಾರ ಯಾವುದನ್ನೂ ಮಾಡದಿದ್ದರೂ, ಆ ಪಕ್ಷ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಅಲ್ಲದೇ ಕೇಂದ್ರ ಸರ್ಕಾರ ಅನುದಾನ ಕಡಿತ ಮಾಡಿರುವುದರಿಂದ ರಾಜ್ಯ ಸರ್ಕಾರದ ಮೇಲೆ ಹೊರೆಯಾಗಿದೆ ಎಂದು ವಿವರಣೆ ನೀಡಿದರು.

ಈ ಕುರಿತು ಜನರಿಗೆ ಮಾಹಿತಿ ನೀಡಲು ಸರ್ಕಾರದಿಂದಲೇ ಜಾಹಿರಾತು ಹೊರಡಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಬರ ಕುರಿತು ಚರ್ಚೆ: ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದಲ್ಲಿ ಆವರಿಸಿರುವ ಬರದ ಬಗ್ಗೆಯೂ ಚರ್ಚೆಯಾಯಿತು. ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ತೆಗೆದುಕೊಂಡ ಕ್ರಮದ ಕುರಿತು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಶಾಸಕರಿಗೆ ಮಾಹಿತಿ ನೀಡಿದರು. ಆದರೆ, ಸಚಿವರು ಹೇಳಿದಂತೆ ಕ್ಷೇತ್ರಗಳಲ್ಲಿ ಬರ ಕಾಮಗಾರಿ ಕಾರ್ಯಗಳು ನಡೆಯುತ್ತಿಲ್ಲ. ಅಧಿಕಾರಿಗಳು ಸಚಿವರ ಮಾತಿಗೆ ಬೆಲೆ ಕೊಡುತ್ತಿಲ್ಲ. ಜಿÇÉಾಧಿಕಾರಿಗಳು ಸರಿಯಾಗಿ ಹಣ ಬಿಡುಗಡೆ
ಮಾಡುತ್ತಿಲ್ಲ ಎಂದು ಶಾಸಕರು ಆರೋಪಿಸಿದರು. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಕೆಲಸ ಮಾಡಿಸುವಂತೆ ಸೂಚಿಸಬೇಕೆಂದು ಆಗ್ರಹಿಸಿದರು ಎಂದು ಹೇಳಲಾಗಿದೆ.

Advertisement

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಶಾಸಕರು ಸಾಧ್ಯವಾದಷ್ಟು ಬೂತ್‌ ಮಟ್ಟದಲ್ಲಿ ಜನರನ್ನು ನೇರವಾಗಿ ಸಂಪರ್ಕಿಸಿ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಲಾಯಿತು. ಸಭೆ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಎರಡೂ ಉಪ ಚುನಾವಣೆ ಯಲ್ಲಿ ಶಾಸಕರು ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಶಾಸಕರು ನಾಲ್ಕು ವರ್ಷದ ಸರ್ಕಾರದ
ಸಾಧನೆಗಳನ್ನು ಬೂತ್‌ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಮಾಹಿತಿ ನೀಡಿ¨ªಾರೆ. ಈ ವರ್ಷವೂ ಕಾರ್ಯಕರ್ತೆಯರಿಗೆ, 1 ಸಾವಿರ ಸಹಾಯಕಿಯರಿಗೆ 500 ರೂ. ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಅಧಿವೇಶನ ನಡೆಯುತ್ತಿರುವುದರಿಂದ ಮಾರ್ಚ್‌ 1 ರಂದು ಸಭೆ ನಡೆಸುವುದಾಗಿ ತಿಳಿಸಿದರು.

“ನಮ್ಮ ಇಂದಿರಾ ಕ್ಯಾಂಟೀನ್‌’ ಜೂನ್‌ 1ರಿಂದ ಆರಂಭ
ಬಜೆಟ್ನಲ್ಲಿ ಘೋಷಣೆ ಮಾಡಿರುವ ನಮ್ಮ ಕ್ಯಾಂಟೀನ್‌ ಯೋಜನೆಗೆ “ಇಂದಿರಾ ಕ್ಯಾಂಟೀನ್‌ ‘ ಎಂದು ಹೆಸರಿಡುವಂತೆ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಸೇರಿದಂತೆ ಅನೇಕ ಶಾಸಕರು ಮುಖ್ಯಮಂತ್ರಿಗೆ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಕೂಡ ಸಹಮತ ವ್ಯಕ್ತಪಡಿಸಿ¨ªಾರೆ ಎನ್ನಲಾಗಿದೆ. ಕ್ಯಾಂಟೀನ್‌ನಲ್ಲಿ ಜೋಳದ ರೊಟ್ಟಿ, ರಾಗಿ ಮು¨ªೆ ಕೂಡ ಇರುವಂತೆ ನೋಡಿಕೊಳ್ಳಬೇಕೆಂದು ಹಲವು ಶಾಸಕರು ಮನವಿ ಮಾಡಿದರು. ಕಾಂಗ್ರೆಸ್‌ ಮೂಲಗಳ ಪ್ರಕಾರ ಜೂನ್‌ 1ರಿಂದ ಕ್ಯಾಂಟೀನ್‌ ಆರಂಭಿಸುವ ಸಾಧ್ಯತೆ ಇದೆ.

ಗೋವಿಂದರಾಜ್‌ ಜೊತೆ ಡಿಕೆಶಿ, ಜಾರ್ಜ್‌ ಚರ್ಚೆ
ಇದೇ ವೇಳೆ, ಡೈರಿ ಪ್ರಕರಣ ಕುರಿತು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಬೆಂಗಳೂರು ನಗರಾಭಿವೃದಿ ಸಚಿವ ಕೆ.ಜೆ.ಜಾರ್ಜ್‌ ಅವರು ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜ್ ಜತೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು. ಡೈರಿಯಲ್ಲಿನ ಮಾಹಿತಿ ಮಾಧ್ಯಮಗಳಲ್ಲಿ ಬಂದ ನಂತರ ಗೋವಿಂದರಾಜ್‌, ಡೈರಿ ತಮ್ಮದಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಈ ಬಗ್ಗೆ ಸಚಿವರು ಗೋವಿಂದರಾಜ್ ಅವರಿಂದ ಸಂಪೂರ್ಣ ಮಾಹಿತಿ ಪಡೆದರು
ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next