ನಾಗಮಂಗಲ: ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.21 ರಿಂದ29ರವರೆಗೆ ನಡೆಯುವ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಕ್ಷೇತ್ರದಲ್ಲಿ ವಿವಿಧಪೂಜಾ ಕೈಂಕರ್ಯ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ.21ರ ಬೆಳಗ್ಗೆ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರು ನಾಂದಿಪೂಜೆ ಹಾಗೂ ಧರ್ಮ ಧ್ವಜಾರೋಹಣ ಮಾಡುವಮೂಲಕ ಜಾತ್ರೆಗೆ ಚಾಲನೆ ನೀಡುವರು. ಮಾ.22ರರಾತ್ರಿ 7 ಕ್ಕೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರಸ್ವಾಮಿ ಉತ್ಸವ ನಡೆಯಲಿದ್ದು, ಮಾ.23ರ ರಾತ್ರಿ 7ಕ್ಕೆ ಮಲ್ಲೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಮಾ.24ರಬೆಳಗ್ಗೆ 9.30ಕ್ಕೆ ಸಾಮೂಹಿಕ ವಿವಾಹ, ಸಂಜೆ 7ಕ್ಕೆ ಸಿದ್ದೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಮಾ.25ರ ಸಂಜೆ 7ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಜ್ವಾಲಾಪೀಠಾರೋಹಣ: ಮಾ.26ರ ಬೆಳಗ್ಗೆ 7.30ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚಾಲಂಕಾರ,ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಭರಣಅಲಂಕಾರ, ಅದೇ ದಿನ ಬೆಳಗ್ಗೆ 9.30ಕ್ಕೆ ಆದಿಚುಂಚನಗಿರಿಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆನಡೆಯಲಿದೆ. ಸಂಜೆ 7ಕ್ಕೆ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರಿಂದ ಜ್ವಾಲಾಪೀಠಾರೋಹಣ,ಸಿದ್ಧಸಿಂಹಾಸನ ಪೂಜೆ ನಡೆಯುತ್ತದೆ. ರಾತ್ರಿ 9 ಗಂಟೆಗೆಚಂದ್ರ ಮಂಡಲೋತ್ಸವ ಪೂಜೆ ಜರುಗಲಿದೆ.
ನಾಟಕ ಪ್ರದರ್ಶನ: ಮಾ.27ರ ಬೆಳಗ್ಗೆ ಕ್ಷೇತ್ರಾಧಿದೇವತೆಗಳಿಗೆ ಅಭಿಷೇಕ ಸೇರಿ ವಿವಿಧ ಪೂಜಾಮಹೋತ್ಸವ ನಡೆಯಲಿದ್ದು, ರಾತ್ರಿ 7ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿಯ ತಿರುಗಣಿ ಉತ್ಸವ,ಪುಷ್ಕರಣಿಯಲ್ಲಿ ತೆಪ್ಪೋತ್ಸವದ ನಂತರ ನಾಟಕಪ್ರದರ್ಶನ ಕಾರ್ಯಕ್ರಮಗಳು ನಡೆಯಲಿವೆ.
ಮಾ.29ರ ಬೆಳಗ್ಗೆ 9ಗಂಟೆಗೆ ಕ್ಷೇತ್ರದ ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕಮತ್ತು ಸಭಾ ಕಾರ್ಯಕ್ರಮದ ಬಳಿಕಧರ್ಮಧ್ವಜಾವರೋಹಣದೊಂದಿಗೆ 9 ದಿನಗಳಜಾತ್ರೆಗೆ ತೆರೆಬೀಳಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
28ಕ್ಕೆ ನಿರ್ಮಲಾನಂದನಾಥ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ :
ಮಾ.28ರ ಮುಂಜಾನೆ ಬ್ರಾಹ್ಮಿ ಮೂಹೂರ್ತದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಬಹಳ ವಿಜೃಂಭಣೆಯಿಂದ ಜರುಗಲಿದೆ. ಇದೇದಿನ ಸಂಜೆ 6ಕ್ಕೆ ಅಕ್ಕಪಕ್ಕ ಗ್ರಾಮಗಳಿಂದ ಆಗಮಿಸುವ ನೂರಾರು ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ಗಿರಿ ಪ್ರದಕ್ಷಿಣಿ ನಡೆಯಲಿದೆ. ಬಳಿಕ ಶ್ರೀ ಸೋಮೇಶ್ವರ ಸ್ವಾಮಿಯ ಉತ್ಸವ ಜರುಗಲಿದೆ.