ಕುಂದಗೋಳ: ತಾಲೂಕಿನ ಪಶುಪತಿಹಾಳ ಗ್ರಾಮದ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿಗಳ ಮಠದಲ್ಲಿ ತ್ರಿವಿಧ ದಾಸೋಹಿ ಶ್ರೀ ಮೃತ್ಯುಂಜಯ್ಯಪ್ಪಗಳ 59ನೇ ಸ್ಮರಣೋತ್ಸವ ಪ್ರಯುಕ್ತ ಜಾತ್ರಾ ಮಹೋತ್ಸವ ಫೆ. 16 ರಿಂದ 18ರ ವರೆಗೆ ನಡೆಯಲಿದೆ.
18ರಂದು ಬೆಳಗ್ಗೆ 9 ಗಂಟೆಗೆ ಪ್ರಭುಸ್ವಾಮಿ ಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಅವರಿಂದ ಷಟಸ್ಥಳ ಧ್ವಜಾರೋಹಣ ನಡೆಯಲಿದ್ದು, ಶ್ರೀ ವಿಜಯಮಹಾಂತೇಶ ದೇವರು ಸಮ್ಮುಖ ವಹಿಸಲಿದ್ದಾರೆ. ನೀಲಗುಂದ ಗುದ್ನೇಶ್ವರ ಮಠದ ಶ್ರೀ ಪ್ರಭುಲಿಂಗ ದೇವರು ನುಡಿಸೇವೆ ಮಾಡಲಿದ್ದಾರೆ. ಸಂಜೆ 7:30 ಗಂಟೆಗೆ ಜಾತ್ರಾ ಮಹೋತ್ಸವ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕಿ ಕುಸುಮಾವತಿ ಶಿವಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಂಪ್ಲಿ, ಕಲ್ಮಠದ ಶ್ರೀ ಅಭಿನವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕುಂದಗೋಳ ಕಲ್ಯಾಣ ಮಠದ ಬಸವಣ್ಣಜ್ಜನವರು ಸಮ್ಮುಖವಹಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಾ| ಶ್ರೀಶೈಲ ಹುದ್ದಾರ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರ, ಎಪಿಎಂಸಿ ಸದಸ್ಯ ಎ.ಬಿ. ಉಪ್ಪಿನ ಪಾಲ್ಗೊಳ್ಳಲಿದ್ದಾರೆ. ಬಸವರಾಜ ಅಂಗಡಿ ಸಂಗಡಿಗರು ಜಾನಪದ ಗೀತೆ ಪ್ರಸ್ತುತ ಪಡಿಸಲಿದ್ದಾರೆ.
17ರಂದು ಮಧ್ಯಾಹ್ನ 12 ಗಂಟೆಗೆ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಸಂಜೆ 4 ಗಂಟೆಗೆ ಹಿ ಶ್ರೀ ಮೃತ್ಯುಂಜಯ್ಯಪ್ಪಗಳ ರಥೋತ್ಸವ ನಡೆಯಲಿದೆ. ಸಂಜೆ 7 ಗಂಟೆಗೆ ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಇಳಕಲ್ಲ ಚಿತ್ತರಗಿ ಸಂಸ್ಥಾನ ಮಠದ ಶ್ರೀ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ.
ಡಾ| ವೀರಣ್ಣ ರಾಜೂರ ಉಪನ್ಯಾಸ ನೀಡಲಿದ್ದಾರೆ. ಗ್ರಾಪಂ ಅಧ್ಯಕ್ಷ ವೀರನಗೌಡ ಪಾಟೀಲ ಸನ್ಮಾನ ಸಮಾರಂಭ ನಡೆಯಲಿದೆ. ಅತಿಥಿಗಳಾಗಿ ಎಂ.ಆರ್. ಪಾಟೀಲ, ಜ್ಯೋತಿ ಬೆಂತೂರ ಪಾಲ್ಗೊಳ್ಳಲಿದ್ದಾರೆ. ಜಯಮ್ಮ ದಾನಮ್ಮನವರ ವಚನ ಗಾಯನ, ವಿದುಷಿ ನಾಗರತ್ನಾ ಹಡಗಲಿ ವಚನ ನೃತ್ಯ ಪ್ರದರ್ಶನ ನೀಡಲಿದ್ದಾರೆ. 18ರಂದು ಸಂಜೆ 5:30 ಗಂಟೆಗೆ ಮಂಗಲೋತ್ಸವ ಕಾರ್ಯಕ್ರಮ ಹಾಗೂ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಅವರಿಂದ ಕಡುಬಿನ ಕಾಳಗ ನಡೆಯಲಿದೆ. ಸಂಜೆ 7 ಗಂಟೆಗೆ ಲಿಂ| ಶ್ರೀ ಮಹಾಂತಪ್ಪಗಳ 27ನೇ ಸ್ಮರಣೋತ್ಸವ ನಡೆಯಲಿದೆ.
ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಶ್ರೀ ಅಲ್ಲಮ್ಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನವಲಗುಂದ ಗವಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಶೇಗುಣಸಿ ಮಹಾಂತದೇವರು ಉಪನ್ಯಾಸ ನೀಡಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಶಾಸಕ ಎಂ.ಎಸ್. ಅಕ್ಕಿ ಪಾಲ್ಗೊಳ್ಳಲಿದ್ದಾರೆ. ಅನನ್ಯ ಹಾಗೂ ಅಮೋಕ್ಷ ತಡಸದ ಅವರಿಂದ ವಚನ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.