Advertisement
ಅಕ್ಷರ ಜಾತ್ರೆ ನಡೆಯುತ್ತಿರುವುದು ವಿಶೇಷತೆ ಪಡೆದುಕೊಂಡಿದ್ದು, ಗಡಿ ಭಾಗದಲ್ಲಿ ಕನ್ನಡದ ಅಸ್ಮಿತೆಗೆ ಈ ಸಮ್ಮೇಳನ ಹೊಸ ರೂಪ ಕೊಡುವುದರಲ್ಲಿ ಮುಖ್ಯ ಪಾತ್ರ ವಹಿಸಿದೆ. ಪದೇ ಪದೇ ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಸಮ್ಮೇಳನ ಮೂಲಕ ಎಚ್ಚರಿಕೆ ನೀಡುವ ವಿಶ್ವಾಸ ಕನ್ನಡಿಗರಲ್ಲಿದೆ. ಶೆ„ಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿತಮ್ಮದೇ ಆದ ಛಾಪು ಮೂಡಿಸಿರುವ ಕೆಎಲ್‌ಇಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.
Related Articles
Advertisement
ಪುಸ್ತಕ ಮಳಿಗೆ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಸಮ್ಮೇಳನ ಸಂಚಿಕೆ ಹಾಗೂ ಗ್ರಂಥಗಳನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ, ಉತ್ತರ ಕನ್ನಡ ಸಂಸದ ಅನಂತ ಕುಮಾರ್‌ಹೆಗಡೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬಿಡುಗಡೆಗೊಳಿಸುವರು.
ಅಖೀಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಉತ್ತಮ ಕಾಂಬಳೆ, ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿದಂತೆ ಮುಖಂಡರು, ಸಾಹಿತಿಗಳು ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮೊದಲನೇ ಗೋಷ್ಠಿ ಗಡಿನಾಡ ಚಿಂತನೆ ನಡೆಯಲಿದ್ದು, ಅಥಣಿ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಡಾ. ಎಚ್.ಐ. ತಿಮ್ಮಾಪುರ ಅಧ್ಯಕ್ಷತೆ ವಹಿಸುವರು. ಕನ್ನಡ ಮರಾಠಿ ಭಾಷಾ ಬಾಂಧವ್ಯ ಕುರಿತು ಡಾ. ಎ.ಜಿ. ಘಾಟಗೆ ಉಪನ್ಯಾಸ ನೀಡಲಿದ್ದಾರೆ. ಗಡಿಭಾಗದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಕುರಿತು ಸಾಹಿತಿ ಡಾ. ಸಂತೋಷ ಹಾನಗಲ್ ಉಪನ್ಯಾಸ ನೀಡಲಿದ್ದಾರೆ.
ಇದನ್ನೂ ಓದಿ:ಅಗ್ನಿಶಾಮಕ ಠಾಣೆಯಿಂದ ಅಣಕು ಪ್ರದರ್ಶನ
ಹುಕ್ಕೇರಿ ಕಸಾಪ ತಾಲೂಕಾಧ್ಯಕ್ಷ ಪ್ರಕಾಶ ದೇಶಪಾಂಡೆ ಆಶಯ ನುಡಿಗಳನ್ನಾಡಲಿದ್ದಾರೆ. ಸಂಜೆ 4 ಗಂಟೆಗೆ ಸಮಕಾಲೀನ ಚಿಂತನೆ ಎರಡನೇ ಗೋಷ್ಠಿಯಲ್ಲಿ ಕವಲಗುಡ್ಡ ಹಣಮಾಪುರದ ಸಿದ್ಧಸಿರಿ ಸಿದ್ಧಾಶ್ರಮದ ಸಿದ್ದಯೋಗಿ ಅಮರೇಶ್ವರ ಮಹಾರಾಜರ ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಎಸ್.ಎಸ್. ಅಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಾಹಿತ್ಯ ಕುರಿತು ಡಾ. ಎಚ್.ಬಿ. ಕೋಲಕಾರ ಉಪನ್ಯಾಸ ನೀಡಲಿದ್ದಾರೆ.
ಸಮಗ್ರ ಕೃಷಿ ಅಭಿವೃದ್ಧಿ ಚಿಂತನೆ ಕುರಿತು ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಎಂ.ಡಿ. ಡಾ. ಅಶೋಕ ಪಾಟೀಲಉಪನ್ಯಾಸ ನೀಡಲಿದ್ದಾರೆ. ಡಾ. ದೇವಿಕಾ ನಗರಕರ ಆಶಯ ನುಡಿಗಳನ್ನಾಡಲಿದ್ದಾರೆ. ಸಂಜೆ 6 ಗಂಟೆಗೆ ಮನೋಹರ ಕೊಕಟನೂರ ಮತ್ತು ದತ್ತಾತ್ರೇಯ ಜೋಶಿ ಹಾಗೂ ಸಂಗಡಿಗರು ಹಾಗೂ ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಭೈರೋಬಾ ಕಾಂಬಳೆ