ಮಂಗಳೂರು: ಕೋಮು ಸಂಘರ್ಷ ಮಾಡುವ ಹುನ್ನಾರದಿಂದ ಮೆಸೇಜ್ ಗಳನ್ನು ಮಾರಿ ಗುಡಿ ಎಂಬ ನಕಲಿ ಇನ್ ಸ್ಟಾ ಗ್ರಮ್ ಖಾತೆ ಮೂಲಕ ಪೋಸ್ಟ್ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಳ್ತಂಗಡಿ ಯ ಮುಹಮ್ಮದ್ ಅಝಲ್( 20 ) ಎಂಬಾತನನ್ನು ಬಂಧಿಸಿ ನಾಯಾಲಯಕ್ಕೆ ಹಾಜರು ಪಡಿಸಲಾಗಿರುತ್ತದೆ . ಮಾನ್ಯ ನ್ಯಾಯಾಲಯ ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
”ಯಾವುದೇ ಧಾರ್ಮಿಕ ವಸ್ತ್ರ ಕಾಲೇಜಿನಲ್ಲಿ ಧರಿಸುವಂತಿಲ್ಲ” ಎಂದು ಹೈಕೋರ್ಟ್ ನೀಡಿದ ಮಧ್ಯಂತರ ತೀರ್ಪನ್ನು ಉಲಂಘಿಸಿ ಮಂಗಳೂರಿನ ಕಾರ್ ಸ್ಟ್ರೀಟ್ ಕಾಲೇಜಿನಲ್ಲಿ 05 ಜನ ವಿದ್ಯಾರ್ಥಿನಿಯರು ಕಾಲೇಜಿನ ತರಗತಿಯನ್ನು ಹಿಜಾಬ್ ಧರಿಸಿ ಪ್ರವೇಶಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ವಿದ್ಯಾರ್ಥಿ ಪ್ರಶ್ನಿಸಿದ್ದನ್ನು ವಿರೋಧಿಸಿ, ಆತನ ಭಾವಚಿತ್ರವಿರುವ ಪೋಸ್ಟ್ ಹಾಕಿ ಅದರಲ್ಲಿ , ಶ್ರದ್ಧಾಂಜಲಿ ಎಂಬ ತಲೆಬರಹ ಹಾಕಿ ಸಾರ್ವಜನಿಕವಾಗಿ ಕೊಲೆ ಬೆದರಿಕೆ ಹಾಕಿದ ಪೋಸ್ಟ್ ಹಾಕಲಾಗಿತ್ತು.
ಶಿವಮೊಗ್ಗದಲ್ಲಿ , ಹರ್ಷನನ್ನು ಕೊಲೆ ಮಾಡಿದ ಹಾಗೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿ ವಿದ್ಯಾರ್ಥಿಗೆ ವಾಟ್ಸಾಪ್ ನಲ್ಲಿ ಮೆಸೇಜ್ ಗಳನ್ನು ಮಾಡಲಾಗಿದೆ.
ವಾಟ್ಸಾಪ್ ಕಾಲ್ ಗಳ ಮೂಲಕ , ಜೀವ ಬೆದರಿಕೆ ಹಾಕಿದ ಹಾಗೂ ನಕಲಿ ಸಾಮಾಜಿಕ ಜಾಲತಾಣ ಖಾತೆಗಳ ಬಗ್ಗೆ , ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ದೂರು ನೀಡಲಾಗಿತ್ತು.