Advertisement

Bomb threat: ಎಂಎನ್‌ಸಿ ಕಂಪನಿಗೆ ಹುಸಿ ಬಾಂಬ್‌ ಬೆದರಿಕೆ 

11:13 AM Aug 14, 2024 | Team Udayavani |

 

Advertisement

ಬೆಂಗಳೂರು: ನಗರದ ಬಹುರಾಷ್ಟ್ರೀಯ (ಎಂಎನ್‌ಸಿ) ಕಂಪನಿಯೊಂದಕ್ಕೆ ಕಿಡಿಗೇಡಿಗಳು ಇ-ಮೇಲ್‌ ಮೂಲಕ ಮಂಗಳವಾರ ಬಾಂಬ್‌ ಇರಿಸಿರುವುದಾಗಿ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಕಂಪನಿಯಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಪುಟ್ಟೇನಹಳ್ಳಿಯ ಬ್ರಾಡ್‌ ಡಾಟ್‌ಕಾಮ್‌ ಎಂಬ ಎಂಎನ್‌ಸಿ ಕಂಪನಿಯ ಇ-ಮೇಲ್‌ಗೆ ಮಧ್ಯಾಹ್ನ ಸುಮಾರು 1 ಗಂಟೆ ಸುಮಾರಿಗೆ ಕಂಪನಿಯ ಇ-ಮೇಲ್‌ ಬಾಂಬ್‌ಗ ಬೆದರಿಕೆ  ಬಂದಿದೆ.

ತಕ್ಷಣ ಕಂಪನಿ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಂಪನಿ ಕಚೇರಿಯಲ್ಲಿದ್ದ ನೌಕರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿದ್ದಾರೆ. ಬಳಿಕ ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನದಳವನ್ನು ಸ್ಥಳಕ್ಕೆ ಕರೆಸಿಕೊಂಡು ಕಂಪನಿಯ ಕಟ್ಟಡ ಹಾಗೂ ಆವರಣವನ್ನೂ ಕೂಲಂಕಷವಾಗಿ ತಪಾಸಣೆ ಮಾಡಿದ್ದಾರೆ. ಕಟ್ಟಡದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು, ಬಾಂಬ್‌ ಹಾಗೂ ಸ್ಟೋಟಕ ಸಾಮಗ್ರಿಗಳು ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಎಂಬುದು ಖಚಿತವಾಗಿದೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಕಳುಹಿಸಿದ ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next