Advertisement

High Court; ನಕಲಿ ಜಾತಿ ಪ್ರಮಾಣ ಪತ್ರ: 3 ಜಿಲ್ಲೆಯ 30 ಮಂದಿಗೆ ನೋಟಿಸ್‌

06:58 PM Apr 02, 2024 | Team Udayavani |

ಬೆಂಗಳೂರು: ಮೊದಲಿಗೆ ಕಬ್ಬಲಿಗ ಜಾತಿ ಪ್ರಮಾಣ ಪತ್ರ ತೆಗೆದುಕೊಂಡು ಬಳಿಕ ಪರಿವಾರ ನಾಯಕ ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ನೋಟಿಸ್‌ ಜಾರಿಗೊಳಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

Advertisement

ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ, ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಯಾದಗಿರಿಯ ರಾಜ್ಯ ಎಸ್‌ಸಿ-ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾ.ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಎಲ್ಲರ ವಿರುದ್ಧ ಹಾಗೂ ಅರ್ಜಿದಾರರು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದುಕೊಂಡಿರುವ ಮಾಹಿತಿ ಆಧರಿಸಿ ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ 3 ವಾರಗಳಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next