Advertisement

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

07:37 PM Jul 06, 2022 | Team Udayavani |

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.

Advertisement

ಜಿಲ್ಲಾ ದಂಡಾಧಿಕಾರಿಗಳು ಜುಲೈ 1 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ
ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ ಜುಲೈ 5 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು ಜುಲೈ 4 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.

ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ , ತನಿಖೆ ನಡೆಸಿ , ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್ಐಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ದೂ.ಸಂ.9480805410 ಗೆ ನೀಡುವಂತೆ ಕೋರಿದೆ.

Advertisement

Udayavani is now on Telegram. Click here to join our channel and stay updated with the latest news.

Next