Advertisement

ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ ತೆರೆದು ಹಣಕ್ಕೆ ಬೇಡಿಕೆ

04:04 PM Apr 11, 2021 | Team Udayavani |

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರ ಹೆಸರಿನಲ್ಲಿ ಯಾರೋ ಖದೀಮರು ನಕಲಿ ಫೇಸ್‌ಬುಕ್‌ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

Advertisement

ಜಿಲ್ಲಾಧಿಕಾರಿಕಾರಿಗಳ ವೈಯಕ್ತಿಕ ಫೇಸ್‌ಬುಕ್‌ ಖಾತೆಯಾಗಿರುವ ಜಿ. ಜಗದೀಶ್‌ ಮಲಲಗದ್ದೆ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಹಲವು ಮಂದಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಲಾಗಿದೆ. ಬಹುತೇಕ ಮಂದಿ ಇವರ ನಕಲಿ ಖಾತೆಯಲ್ಲಿ ಫ್ರೆಂಡ್ಸ್‌ ಆಗಿದ್ದಾರೆ.

ಈ ನಕಲಿ ಖಾತೆಯಲ್ಲಿ ಫ್ರೆಂಡ್ಸ್‌ ಆಗಿರುವವರಿಗೆ ಕಿಡಿಗೇಡಿಗಳು ಸಂದೇಶ ಕಳುಹಿಸಿ ತುರ್ತು ಹಣ ಕಳುಹಿಸುವಂತೆ ಮನವಿ ಮಾಡುತ್ತಿದ್ದಾರೆ. ಇದರಿಂದ ಅನುಮಾನಗೊಂಡ ಕೆಲವರು ಈ ಬಗ್ಗೆ ಜಿÇÉಾಧಿಕಾರಿಯ ಗಮನಕ್ಕೆ ತಂದಿದ್ದಾರೆ. ಆಗ ಇದೊಂದು ನಕಲಿ ಖಾತೆ ಎಂಬುವುದು ಗೊತ್ತಾಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಜಿಲ್ಲಾಧಿಕಾರಿಕಾರಿ ಜಿ.ಜಗದೀಶ್‌ ಅವರು ತನ್ನ ಫೇಸ್‌ಬುಕ್‌ನಲ್ಲಿ ಈ ನಕಲಿ ಖಾತೆ ಹಾಗೂ ಫ್ರೆಂಡ್ಸ್‌ಗಳಿಗೆ ಕಳುಹಿಸಿರುವ ಸಂದೇಶದ ಸ್ಕ್ರೀನ್‌ಶಾಟ್‌ಗಳನ್ನು ಹಾಕಿ, ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿ ಮಾಡಿದ್ದಾರೆ. ಇದರ ಬಗ್ಗೆ ನಾನು ದೂರು ನೀಡಿದ್ದೇನೆ. ಯಾರು ಹಣ ಹಾಕಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next