Advertisement
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಿಶುಕುಮಾರ್ (45) ಬಂಧಿತ. ಆರೋಪಿ ಮಲ್ಲೇಶ್ವರ ನಿವಾಸಿ ರಾಘವೇಂದ್ರ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ರಾಘವೇಂದ್ರ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
Related Articles
Advertisement
ವಂಚನೆಯನೇ ಕೆಲಸ ಮಾಡಿಕೊಂಡಿದ್ದ: ಕೆಲ ದಿನಗಳ ಬಳಿಕ ಈ ವಿಚಾರವನ್ನು ರಾಘವೇಂದ್ರ ತಮ್ಮ ಸ್ನೇಹಿತರ ಬಳಿ ವಿಚಾರಿಸಿದಾಗ, ಆತ ನಕಲಿ ಪೊಲೀಸ್ ಅಧಿಕಾರಿ ಎಂಬುದು ಗೊತ್ತಾಗಿದೆ. ಅಲ್ಲದೆ, ಈತ ಕೆಲವರಿಗೆ ತಾನು ಐಪಿಎಸ್ ಅರ್ಜನ್, ಇನ್ನು ಕೆಲವರಿಗೆ ಎಸಿಪಿ ವಿಶುಕುಮಾರ್ ಎಂದು ಹೇಳಿಕೊಂಡು ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಸಿಸಿಬಿಗೆ ದೂರು ನೀಡಿದ್ದರು. ಬಳಿಕ ಕಾಟನ್ ಪೇಟೆ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಯಾವುದೇ ಕೆಲಸಕ್ಕೆ ಹೋಗದೆ ಇದೇ ರೀತಿ ವಂಚನೆ ಮಾಡುವುದನ್ನು ಕಾಯಕ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ವರ್ಗಾವಣೆ ದಂಧೆ ನಡೆಸುತ್ತಿದ್ದ ಆರೋಪಿ: ತಾನೂ ಐಪಿಎಸ್ ಅಧಿಕಾರಿ, ತನ್ನ ಹೆಸರು ಅರ್ಜುನ್ ಅಥವಾ ಭವನ್ ವಿ.ಕುಮಾರ್ ಎಂದು ಪರಿಚಯಿಸಿ ಕೊಳ್ಳುತ್ತಿದ್ದ. ಬಳಿಕ ವರ್ಗಾವಣೆ ದಂಧೆ ಮಾಡುತ್ತಿದ್ದ. ಅಲ್ಲದೆ, ತನ್ನ ಸಂಬಂಧಿಕರು ಹಿರಿಯ ಐಪಿಎಸ್ ಅಧಿಕಾರಿ ಗಳಿದ್ದಾರೆ. ಅವರ ಮೂಲಕ ವರ್ಗಾವಣೆ ಮಾಡಿಸಿಕೊಡುತ್ತೇನೆ ಮತ್ತು ಒಳ್ಳೆ ಕಡೆ ಪೋಸ್ಟಿಂಗ್ ಕೊಡಿಸುತ್ತೇನೆ ಎಂದು ನಂಬಿಸುತ್ತಿದ್ದ. ಈತನ ಮಾತಿಗೆ ಮರುಳಾದ ಕೆಲವು ಪೊಲೀಸರು ಪೋಸ್ಟಿಂಗ್ ಮಾಡಿಕೊಡಲು ಹಣ ನೀಡಿದ್ದಾರೆ. ಹೀಗೆ ಒಂದೂವರೆ ಕೋಟಿಗೂ ಅಧಿಕ ಹಣ ಪಡೆದಿದ್ದಾನೆ ಎಂದು ಹೇಳಲಾಗಿದೆ. ಹಣ ಪಡೆದ ಬಳಿಕ ಪೋಸ್ಟಿಂಗ್ ವಿಚಾರ ಕೇಳಿದಾಗ ಸಬೂಬು ಹೇಳುತ್ತಿದ್ದ ಎಂಬುದು ಗೊತ್ತಾಗಿದೆ.
ಪ್ರಕರಣ ಸಿಸಿಬಿಗೆ! : ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆದರೆ, ಆರೋಪಿ ಪೊಲೀಸರ ಹೆಸರು ಬಳಸಿಕೊಂಡು ಕೋಟ್ಯಂತರ ರೂ. ವಂಚಿಸಿದ್ದರಿಂದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಪ್ರಕರಣ ವರ್ಗಾವಣೆಯಾಗಲಿದೆ. ಇದೇ ರೀತಿ ಎಷ್ಟು ಜನರಿಗೆ ವಂಚಿಸಿದ್ದಾನೆ? ಯಾರಿಗೆಲ್ಲ ವಂಚಿಸಿದ್ದಾನೆ? ಇತರೆ ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.