ಬೆಂಗಳೂರು: “ಡಿಕೆ ಶಿವಕುಮಾರ್ ಅವರು ನನಗೆ ಕೋಲಾರ ಟಿಕೆಟ್ ತಪ್ಪಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನಾಭಿಪ್ರಾಯವಿದ್ದರೂ, ಡಿಕೆ ಶಿವಕುಮಾರ್ ತಾವೊಬ್ಬರೇ ರಾಜ್ಯ ಸುತ್ತಿ ತಾವೇ ಲೀಡರ್ ಎಂದು ಬಿಂಬಿಸಿಕೊಳ್ಳಲು ಹೊರಟಿದ್ದಾರೆ”
ಈ ರೀತಿಯ ಒಕ್ಕಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಲೆಟರ್ ಹೆಡ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವೊಂದು ವೈರಲ್ ಆಗುತ್ತಿದೆ. ಇದೀಗ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಇದು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ.
ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:Asia Cup 2023 ಆತಿಥ್ಯ ಕೈ ತಪ್ಪುವ ಆತಂಕದಲ್ಲಿ ಪಾಕ್: ಗಾಳ ಬೀಸಿದ ಬಾಂಗ್ಲಾ- ಲಂಕಾ
ನನ್ನ ಮತ್ತು ಡಿಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಿದ್ದೇನೆ ಎಂದಿದ್ದಾರೆ.