Advertisement

Madikeri ನೈತಿಕ ಪೊಲೀಸ್‌ ಗಿರಿಯ ಕುರಿತು ಸುಳ್ಳು ಸುದ್ದಿ: ಪೊಲೀಸರ ಎಚ್ಚರಿಕೆ

11:45 PM Oct 28, 2023 | Team Udayavani |

ಮಡಿಕೇರಿ: ನಾಪೋಕ್ಲು ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್‌ ಗಿರಿಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಕೋಮು ಸೌಹಾರ್ದತೆಕ್ಕೆ ಧಕ್ಕೆ ತರುವ ಯತ್ನ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವವರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾಪೋಕ್ಲು ಪೊಲೀಸ್‌ ಠಾಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Advertisement

ವ್ಯಾಟ್ಸ್‌ಆ್ಯಪ್‌, ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ ಮತ್ತು ಟ್ವಿಟರ್‌ ಮೂಲಕ ನೈತಿಕ ಪೊಲೀಸ್‌ ಗಿರಿಯ ಹೆಸರಿನಲ್ಲಿ ಸುಳ್ಳು ಸುದ್ದಿಗಳನ್ನು ಹರಡಿ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಇದನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next