Advertisement

Passenger ನಿಂದಲೇ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ!

02:14 AM Nov 11, 2024 | Team Udayavani |

ಕೋಲ್ಕತಾ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹುಸಿ ಬಾಂಬ್‌ ಕರೆ ನೀಡಿದ ಘಟನೆ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೂಲಗಳ ಪ್ರಕಾರ ಅಗರ್ತಲಾಕ್ಕೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ವ್ಯಕ್ತಿಯೊಬ್ಬರು ಸಿಎಸ್‌ಎಫ್ಐ ಸಿಬಂದಿಗೆ ತಿಳಿಸಿದ್ದರು. ಇದಾದ ಬಳಿಕ ನಿಯಮದ ಪ್ರಕಾರ ಎಲ್ಲರನ್ನೂ ಪರೀಕ್ಷೆ ನಡೆಸಿದ ಸಿಬಂದಿ, ಇದೊಂದು ಸುಳ್ಳು ಎಂದು ತೀರ್ಮಾನಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next