Advertisement
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಟ್ಟಿದೆ. ಗುರುವಾರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಭಾಗಕ್ಕೆ ಈ ಚಂಡಮಾರುತದ ಪ್ರಭಾವ ಬೀರಿದೆ. ಇದರ ಪರಿಣಾಮ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಚಳಿಯ ವಾತಾವರಣ ಸೃಷ್ಟಿಯಾಗಿದೆ.
Related Articles
Advertisement
ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿ.11 ಹಾಗೂ 12ರಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ 23 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ, ಚೆನ್ನೈನ ಉತ್ತರ ಹಾಗೂ ಆಂದ್ರದ ದಕ್ಷಿಣ ಭಾಗದಲ್ಲಿ ಹೆಚ್ಚಿನ ತೀವ್ರತೆ ಉಂಟಾಗಲಿದೆ. ಉತ್ತರ ಭಾರತದ ಭಾಗದಿಂದ ದಕ್ಷಿಣ ಭಾರತದ ಕಡೆ ಗಾಳಿ ಬೀಸಿದರೆ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳ ಕೆಲ ಭಾಗಗಳಲ್ಲಿ ಚಳಿಯ ವಾತಾವರಣ ಉಂಟಾಗುತ್ತದೆ