ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರಕಾರ ಪತನವಾಗಲಿದೆ ಎಂಬುದು ಕುಮಾರಸ್ವಾಮಿ ಅವರ ಹಗಲುಗನಸು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದರು.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಬರೀ ಹಗಲುಗನಸು ಕಾಣುತ್ತಿರುತ್ತಾರೆ. ಲೋಕಸಭೆ ಚುನಾವಣೆ ಬಳಿಕವೂ ನಮ್ಮ ಸರಕಾರ ಗಟ್ಟಿಯಾಗಿ ಇರಲಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪುರದಲ್ಲಿ 1 ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯಭೇರಿ ಗಳಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ನಾಡಿನ ಜನರ ಮನಗೆದ್ದಿವೆ. ಫಲಿತಾಂಶದ ಬಳಿಕ ಜೆಡಿಎಸ್ ಗತಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಪೆನ್‌ಡ್ರೈವ್ ಪ್ರಕರಣವು ಅವರ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಲಿದೆ ಎಂದದರು.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಳ್ಳಬೇಕೆಂದಿದ್ದಾರೆ. ಸದ್ಯ ನಡೆಯುತ್ತಿರುವ ಎಸ್‌ಐಟಿ ತನಿಖೆ ಬಗ್ಗೆ ಸಚಿವನಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು.