Advertisement

ಕುಸಿಯುತ್ತಿದೆ ಮಲ್ಲಿಕಾರ್ಜುನ ಬೆಟ್ಟದ ಕಲ್ಲುಗಳು

09:14 AM Oct 24, 2019 | keerthan |

ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನದಿಗಳ ಅಬ್ಬರವೂ ಹೆಚ್ಚಾಗಿದೆ. ಗೋಕಾಕ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಲ್ಲಿಕಾರ್ಜುನ ಬೆಟ್ಟದಲ್ಲಿನ ಕಲ್ಲುಗಳು ಕುಸಿಯುತ್ತಿದ್ದು ಕೆಳಗಿನ ಪ್ರದೇಶದಲ್ಲಿ ಇರುವ ಜನರಿಗೆ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಂಡೆಗಳ ತೆರವುಗೊಳಿಸಲು ಎನ್ ಡಿ ಆರ್ ಎಫ್ ತಂಡವನ್ನು ಕರೆಸಲಾಗಿದ್ದು ರಕ್ಷಣಾ ಕಾರ್ಯ ಆರಂಭವಾಗಿದೆ.

Advertisement

ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಅಧಿಕ ಮಳೆಯಿಂದಾಗಿ ಕೃಷ್ಣಾ ನದಿಗೆ ಒಂದು ಲಕ್ಷ ಕ್ಕೂ ಹೆಚ್ಚು ನೀರು ಬರುತ್ತಿದೆ. ಆದರೆ ಕಳೆದ ಎರಡು ದಿನಗಳಿಂದ ತೀವ್ರ ಆತಂಕ ಉಂಟುಮಾಡಿದ್ದ ಮಲಪ್ರಭಾ ಜಲಾಶಯದ ಒಳಹರಿವಿನಲ್ಲಿ ಗಣನೀಯ ಇಳಿಕೆಯಾಗಿದ್ದು ಈಗ 8700 ಕ್ಯೂಸೆಕ್ಸ ನೀರು ಹರಿದು ಬರುತ್ತಿದೆ.

ಈ ಮಧ್ಯೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿನ ಪರಿಹಾರ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಸಂತ್ರಸ್ತರು ಘೆರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next