Advertisement

ಅಂಗನವಾಡಿ ಕೇಂದ್ರ ಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ

03:25 PM Nov 09, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಯಶಸ್ವಿಯಾಗಿ ಆರಂಭಿಸಿದ್ದು, ಕೊರೊನಾ ಸೋಂಕು ಮಕ್ಕಳಿಗೆ ಹರಡದಂತೆ ಹೆಚ್ಚಿನ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

Advertisement

ನಗರದ ಎಚ್‌.ಎಸ್‌.ಗಾರ್ಡನ್‌ನ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕೇಕ್‌ ಕತ್ತರಿಸಿ ಮಕ್ಕಳಿಗೆ ತಿನಿಸುವುದರ ಮೂಲಕ ಅಂಗನವಾಡಿ ಕೇಂದ್ರ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಅಂಗನವಾಡಿ ಕೇಂದ್ರ ಆರಂಭಿಸಲಾಗಿದೆ.  ಮಕ್ಕಳ ಸುರಕ್ಷತೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಕೊರೊನಾ ಹರಡದಂತೆ ನೋಡಿಕೊಳ್ಳಿ: ಅಂಗನವಾಡಿ ಕೇಂದ್ರಗಳ ಸ್ವತ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸ ಬೇಕು, ಮಕ್ಕಳು ಬಹಳ ಚಿಕ್ಕವರಾಗಿದ್ದು, ಮುಗ್ಧರಾಗಿದ್ದಾರೆ. ಎಲ್ಲಾ ಕೇಂದ್ರಗಳಲ್ಲೂ ಸರ್ಕಾರದ ಕೋವಿಡ್‌ ಮಾರ್ಗಸೂಚಿ ಕ್ರಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕು ಹೆಚ್ಚಿದ್ದ ವೇಳೆ ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರು ಹೆಚ್ಚು ಶ್ರಮವಹಿಸಿದ್ದೀರಿ, ನಿಮಗೆಲ್ಲ ಧನ್ಯವಾದಗಳು. ಮುಂದೆಯೂ ಮಕ್ಕಳಿ ಗೆ ಕೊರೊನಾ ಹರಡದಂತೆ ನಿಗಾವಹಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.

ಶಾಲಾ ಮಕ್ಕಳಿಗೆ ಸೋಂಕು ಬಂದಿಲ್ಲ: ಜಿಲ್ಲೆಯಲ್ಲಿ ಈಗಾಗಲೇ 1ನೇ, ಅದಕ್ಕೂ ಮೇಲ್ಪಟ್ಟ ಎಲ್ಲಾ ತರಗತಿ ಆರಂಭಗೊಂಡು ಯಶಸ್ವಿಯಾಗಿ ನಡೆಯುತ್ತಿವೆ. ನಮ್ಮ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವ ಮಕ್ಕಳಿಗೂ ಕೊರೊನಾ ಸೋಂಕು ಬಂದಿಲ್ಲ. ಅದೇ ರೀತಿ ಅಂಗನವಾಡಿ ಕೇಂದ್ರಗಳಲ್ಲೂ ಸರ್ಕಾರದ ಕೋವಿಡ್‌ ಮಾರ್ಗಸೂಚಿ ಪಾಲಿಸುವುದರ ಜೊತೆಗೆ ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಅಂಗನವಾಡಿ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಹೇಳಿದರು.

ನಿರ್ಲಕ್ಷ್ಯ ಸಲ್ಲದು: ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿಯಂತಹ ಸಾಮಾನ್ಯ ರೋಗ ಲಕ್ಷಣಗಳು ಕಂಡು ಬಂದಾಗ ಅಂಗನವಾಡಿಗೆ ಕಳುಹಿಸುವುದು ಬೇಡ. ತಕ್ಷಣವೇ ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಕೊಡಿಸಬೇಕು. ಮಕ್ಕಳು ಆರೋಗ್ಯವಾಗಿದ್ದಾಗ ಮಾತ್ರವೇ ಅಂಗನವಾಡಿಗೆ ಕಳುಹಿಸಿ ಎಂದು ಅವರು ಪೋಷಕರಿಗೆ ಸಲಹೆ ನೀಡಿದರು.

Advertisement

ಪುಟಾಣಿಗಳಿಗೆ ಶುಭ ಕೋರಿಕೆ: ಪುಟಾಣಿ ಮಕ್ಕಳೊಂದಿಗೆ ಅಕ್ಕರೆಯ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಬಹುದಿನಗಳ ನಂತರ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿರುವ ಬಗ್ಗೆ ಮಕ್ಕಳಲ್ಲಿ ಉಂಟಾದ ಅನುಭವ ಹಾಗೂ ಮಕ್ಕಳ ಯೋಗಕ್ಷೇಮವನ್ನು ವಿಚಾರಿಸಿದರು. ಅಂಗನವಾಡಿ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಎಚ್‌.ಎಸ್‌.ಗಾರ್ಡನ್‌ನ ಅಂಗನವಾಡಿ ಕೇಂದ್ರವನ್ನು ಬಲೂನ್‌, ತಳಿರು-ತೋರಣಗಳಿಂದ ಆಕರ್ಷಣೀಯವಾಗಿ ಅಲಂಕರಿಸಲಾಗಿತ್ತು. ಚಿಣ್ಣರು ಬರುತ್ತಿದ್ದಂತೆ ಅಂಗನವಾಡಿ ಕಾರ್ಯಕರ್ತೆಯರು ಹೂವು, ಬಿಸ್ಕೆಟ್‌ ಅನ್ನು ನೀಡಿ ಸ್ವಾಗತಿಸಿದರು.

ಜಿಪಂ ಸಿಇಒ ಪಿ.ಶಿವಶಂಕರ್‌, ನಗರಸಭೆ ಅಧ್ಯಕ್ಷ ಆನಂದ್‌ರೆಡ್ಡಿ, ನಗರಸಭೆ ಪೌರಾಯುಕ್ತ ಡಾ.ಮಹಂತೇಶ್‌, ನಗರಸಭೆ ಸದಸ್ಯರಾದ ಸ್ವಾತಿ ಮಂಜುನಾಥ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ, ಶಿಶು ಅಭಿವೃದ್ಧಿ ಅಧಿ ಕಾರಿ ಗಂಗಾಧರ್‌, ಅಂಗನವಾಡಿಯ ಚಿಣ್ಣರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next