Advertisement

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

05:40 PM Sep 26, 2024 | Team Udayavani |

ದಾವಣಗೆರೆ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ, ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಗುರುವಾರ(ಸೆ26) ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ ‘ ರಾಜಭವನದ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚು ಮಾಡುತ್ತಿದೆ. ರಾಜ್ಯದಲ್ಲಿಯೂ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದೆ’ ಎಂದರು.

‘ ಸಿದ್ದರಾಮಯ್ಯ ಅವರ ಜನಪರ ಆಡಳಿತವನ್ನು ಸಹಿಸದ ಬಿಜೆಪಿಯವರು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರವೇನೂ ಇಲ್ಲ ಎಂಬುದು ಸ್ವತಃ ಬಿಜೆಪಿ ನಾಯಕರಿಗೇ ಗೊತ್ತಿದೆ. ಆದರೂ ಸಹ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವುದು ಸಾಧ್ಯ ಇಲ್ಲವೆಂದು ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರೆಸುತ್ತಿದ್ದಾರೆ ‘ ಎಂದರು.

‘ಸಿದ್ದರಾಮಯ್ಯನವರ ಪರ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ಶಾಸಕರಿದ್ದಾರೆ. ರಾಜ್ಯದ ಜನರ ಆಶೀರ್ವಾದವಿದ್ದು ಮುಂದಿನ ದಿನಗಳಲ್ಲಿ ಬಿಜೆಪಿಗರಿಗೆ ತಕ್ಕಪಾಠ ಕಲಿಸಲಿದ್ದಾರೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next