Advertisement
ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರೇ ಪೀಠಾಧಿಪತಿಗಳಾಗಿ ಮುಂದುವರಿಯಬೇಕು ಎಂದು ಒತ್ತಾಯಿಸಿ ರಕ್ತದಲ್ಲಿ ಸಹಿ ಚಳವಳಿ ನಡೆಸುವ ಮೂಲಕ ಮಠದ ವಿರೋಧಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
Related Articles
Advertisement
ಗ್ರಾಮದ ದೇವಾಲಯದಲ್ಲಿ ಗ್ರಾಮದ ಮುಖಂಡರು, ಭಕ್ತರೆಲ್ಲರೂ ಸೇರಿ ಶ್ರೀ ತರಳಬಾಳು ಬೃಹನ್ಮಠದ ಮೇಲೆ ಸುಳ್ಳು ಸುದ್ದಿ ಪಿತೂರಿ ಆರೋಪ ಮಾಡುವ ಬಂಡವಾಳಶಾಹಿಗಳ ವಿರುದ್ಧ ತೊಡೆ ತಟ್ಟಿ ನಿಲ್ಲೋಣ. ಜಗದ್ಗುರುಗಳವರ ದಿವ್ಯ ನೇತೃತ್ವದಲ್ಲಿ ಸಮಾಜ ಮುಂದುವರೆಯಲೆಂಬ ಆಶಯದೊಂದಿಗೆ ರಕ್ತದಲ್ಲಿ ಸಹಿ ಮಾಡಿ ನಿರ್ಣಯ ಕೈಗೊಂಡಿದ್ದೇವೆ. ಎಲ್ಲರೂ ಸಮ್ಮತಿಸಿ, ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.ಸಿರಿಗೆರೆ ಮಠವು ಬೇರೆ ಮಠಗಳಂತೆ ಆಗಬಾರದು. ರಕ್ತದಲ್ಲಿ ಸಹಿ ಮಾಡಿ ಸ್ವಾಮೀಜಿಗಳು ಕೊನೆ ಉಸಿರು ಇರುವವರೆಗೂ ಮುಂದುವರಿಯಬೇಕು. ಹೆಮ್ಮಬೇತೂರು ಗ್ರಾಮ ಮಾತ್ರವಲ್ಲ, ಸುತ್ತಮುತ್ತಲಿನ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಆಧುನಿಕ ಭಗೀರಥರು. ಎಷ್ಟೋ ಹಳ್ಳಿಗಳಲ್ಲಿ ಇಂದಿಗೂ ನೀರಾವರಿ ಸೌಲಭ್ಯ ಕಂಡಿದೆ ಅದು ಸಿರಿಗೆರೆ ಶ್ರೀಗಳಿಂದ ಆಗಿರುವ ಕಾರ್ಯದಿಂದ ಮಾತ್ರ. ಹಾಗಾಗಿ ಶ್ರೀಗಳ ಬದಲಾವಣೆ ಮಾಡಬಾರದು ಎಂಬ ನಿರ್ಣಯ ತೆಗೆದುಕೊಂಡು ಶ್ರೀಗಳ ವಿರುದ್ಧ ಇರುವವರ ಷಡ್ಯಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದರು.ಪರಮಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಕರಣಧಾರತ್ವದಲ್ಲಿ ಕಾರ್ಯಗತಗೊಂಡಿರುವ 20 ಕ್ಕೂ ಹೆಚ್ಚು ಏತನೀರಾವರಿ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೆರೆಗಳಿಗೆ ನೀರು ತುಂಬಿಸುವ ಸತ್ಕಾರ್ಯ ಮಾಡಿದ್ದಾರೆ. ಸಮಾಜಮುಖಿ ನಿಸ್ವಾರ್ಥ ಮುಂದಾಳತ್ವ ಎಷ್ಟು ಅವಶ್ಯಕ, ಅದರಲ್ಲೂ ಸರ್ಕಾರ ಕೈಗೊಳ್ಳುವ ಜನಪರ ಯೋಜನೆಗಳು ಪರಿಣಾಮಕಾರಿ ಅನುಷ್ಠಾನದ ವಿಚಾರದಲ್ಲಿ ಪರಮಪೂಜ್ಯರು ಮತ್ತು ಶ್ರೀ ಮಠದ ಕಾರ್ಯವೈಖರಿ ಒಂದು ಜಲ್ವಂತ ಉದಾಹರಣೆ ಎಂದು ತಿಳಿಸಿದರು.
ಸಭೆಯಲ್ಲಿ ಎಸ್. ಆರ್. ಪ್ರಕಾಶ್, ನಾಗರಾಜಪ್ಪ, ಎಸ್. ಎನ್. ಕಲ್ಲೇಶಪ್ಪ, ಎನ್. ಎಂ. ಪ್ರಸನ್ನ, ಎಸ್. ಬಸವರಾಜ್, ಬಿ. ಎಸ್. ಸಚಿನ್, ಪಂಪಣ್ಣ, ಸಿ. ಎಸ್. ಪ್ರಕಾಶ, ಹೆಚ್. ಆರ್. ಶಿವಕುಮಾರ, ಇ. ರಮೇಶ, ಕರಿಬಸಣ್ಣ, ಎಸ್. ಎಸ್. ಸೋಮಶೇಖರ್, ಯು. ಆರ್. ಎಸ್. ಶ್ರೀನಿವಾಸ್, ಜಿ ಎಸ್ ರಾಜಶೇಖರ್, ತಿಪ್ಪೇಸ್ವಾಮಿ, ಪರಿಶಿಷ್ಟ ಪಂಗಡ ಸಮಾಜದ ಮುಖಂಡ ಟಿ ಡಿ ರಮೇಶ್, ಬಕ್ಕೇಶ್ ಇತರರು ಇದ್ದರು.
ಇದನ್ನೂ ಓದಿ: Actor Darshan: ಸದ್ಯಕ್ಕಿಲ್ಲ ದರ್ಶನ್‌ಗೆ ಮನೆಯೂಟದ ಭಾಗ್ಯ; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ