Advertisement

Priyank Kharge ವಿರುದ್ಧ ತಪ್ಪು ಸಂದೇಶ ಪ್ರಚಾರ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಬಂಧನ

02:33 PM Aug 23, 2023 | Team Udayavani |

ಕಲಬುರಗಿ: ಕಲಬುರಗಿ ಜಿಲ್ಲಾ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಆರೋಪ ಪ್ರಕರಣದಡಿಯಲ್ಲಿ ಮಣಿಕಂಠ ರಾಠೋಡ್ ರನ್ನು ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಣಿಕಂಠ ರಾಠೋಡ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಆರೋಪದಡಿಯಲ್ಲಿ ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A 505(1)B ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಮೇರೆಗೆ ಇಂದು (ಆಗಸ್ಟ್ 23) ಪೊಲೀಸರು ಮಣಿಕಂಠ ರಾಠೋಡ್ ಬಂಧನವಾಗಿದೆ.

ಕಲಗುರ್ತಿ ಗ್ರಾಮದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ಒಂದು ತಿಂಗಳಾಗಿದೆ. ಆರೋಪಿಗಳು ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಇದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿಲ್ಲ. ಪೊಲೀಸರು ಪ್ರಿಯಾಂಕ್ ಖರ್ಗೆ ಕೈಗೊಂಬೆಯಾಗಿದ್ದಾರೆ ಎಂದು ಪೊಲೀಸರ ವಿರುದ್ಧ ಮಣಿಕಂಠ ರಾಠೋಡ್ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ತಪ್ಪು ಸಂದೇಶ ರವಾನೆ ಆರೋಪದ ಮೇಲೆ ಮಣಿಕಂಠ ರಾಠೋಡ್ ನನ್ನು ಬಂಧಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಮಣಿಕಂಠ ರಾಥೋಡ್ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಳಿದಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದು, ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಗುರ್ತಿಯ ಯುವಕನ ಆತ್ಮಹತ್ಯೆಗೆ ಸಚಿವ ಖರ್ಗೆ ಅವರ ಬೆಂಬಲಿಗರು ಕಾರಣವಾಗಿದ್ದಾರೆ. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿಲ್ಲ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next