Advertisement

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

06:42 PM Jul 08, 2024 | Team Udayavani |

“ಫ್ಯಾಮಿಲಿ ಡ್ರಾಮಾ’ ಚಿತ್ರ ಈಗ ಟೈಟಲ್‌ ಟ್ರ್ಯಾಕ್‌ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಗಾಯಕ ವಾಸುಕಿ ವೈಭವ್‌ ಧ್ವನಿಯಲ್ಲಿ “ಲಿ ಲಿ ಫ್ಯಾಮಿ ಹಾಡು…’ ಹಾಡು ಮೂಡಿಬಂದಿದೆ.

Advertisement

ಆಕರ್ಷ್‌ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾವಿದು. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್‌, ಸಿಂಧು ಶ್ರೀನಿವಾಸ್‌ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ ಎಂಟರ್‌ಟೈನ್ಮೆಂಟ್‌ ಮೂಲಕ ಬಂಡವಾಳ ಹೂಡಿದ್ದಾರೆ.

ಇನ್ನೂ ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು “ಫ್ಯಾಮಿಲಿ ಡ್ರಾಮಾ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಬಜೆಟ್‌ನ ಸ್ಟಾರ್‌ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next