Advertisement

“ಫ್ಯಾಮಿಲಿ ಪ್ಯಾಕ್’ಮೋಷನ್ ಪೋಸ್ಟರ್ ಬಂತು

07:40 AM Jun 17, 2020 | Lakshmi GovindaRaj |

ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ “ಫ್ಯಾಮಿಲಿ ಪ್ಯಾಕ್’ ಚಿತ್ರದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮನರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

Advertisement

ಈ ಹಿಂದೆ “ಸಂಕಷ್ಟಕರ ಗಣಪತಿ’ ಚಿತ್ರ ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ ಎಸ್. ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದು, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಅಚ್ಯುತಕುಮಾರ್, ದತ್ತಣ್ಣ, ತಿಲಕ್, ನಾಗಭೂಷಣ್ ಸೇರಿದಂತೆ ಮುಂತಾದವರ ತಾರಾಬಳಗವಿದೆ.

ಇನ್ನು ಈ ಚಿತ್ರಕ್ಕೆ ಗುರುಕಿರಣ್  ಸಂಗೀತ ನೀಡುತ್ತಿದ್ದು, ಉದಯಲೀಲ ಅವರ ಛಾಯಾಗ್ರಹಣವಿದೆ. ಮಾಸ್ತಿ “ಫ್ಯಾಮಿಲಿ ಪ್ಯಾಕ್’‌ಗೆ ಸಂಭಾಷಣೆ ಬರೆಯುತ್ತಿದ್ದು, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next