Advertisement

ಪುನೀತ್‌ ನಿರ್ಮಾಣದ ಫ್ಯಾಮಿಲಿ ಪ್ಯಾಕ್‌ ರೆಡಿ: ಲಿಖೀತ್‌- ಅಮೃತಾ ನಾಯಕ- ನಾಯಕಿ

03:00 PM Jul 22, 2021 | Team Udayavani |

ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ “ಫ್ಯಾಮಿಲಿ ಪ್ಯಾಕ್‌’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರಿನ ಅನೇಕ ಕಡೆ ಮೂವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರ ಚಟುವಟಿಕೆಗಳು ಭರದಿಂದ ಸಾಗಿದೆ.

Advertisement

ಚಿತ್ರೀಕರಣದ ಕೊನೆಯ ದಿವಸಪುನೀತ್‌ ರಾಜಕುಮಾರ್‌ ಹಾಗೂ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ, ಚಿತ್ರೀಕರಣ ವೀಕ್ಷಿಸಿ, ಚಿತ್ರತಂಡದ ಪ್ರತಿಯೊಬ್ಬ ಸದಸ್ಯರ ಕಾರ್ಯವನ್ನು ಶ್ಲಾ ಸಿದ್ದಾರೆ. ನಾಯಕ ಲಿಖೀತ್‌ ಶೆಟ್ಟಿ, ಅಮೃತಾ ಅಯ್ಯಂಗಾರ್‌, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಪದ್ಮಜಾ ರಾವ್‌, ಶರ್ಮಿತಾ ಗೌಡ, ಸಿಹಿಕಹಿ ಚಂದ್ರು ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮನರಂಜನೆ ಪ್ರಧಾನವಾಗಿರುವ ಈ ಚಿತ್ರದ ನಿರ್ಮಾಪಕರು ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಹಾಗೂ ಲಿಖೀತ್‌ ಶೆಟ್ಟಿ. ಈ ಹಿಂದೆ “ಸಂಕಷ್ಟಕರ ಗಣಪತಿ’ ಚಿತ್ರವನ್ನು ನಿರ್ದೇಶಿಸಿದ್ದ ಅರ್ಜುನ್‌ ಕುಮಾರ್‌ ಫ್ಯಾಮಿಲಿ ಪ್ಯಾಕ್‌ನ ನಿರ್ದೇಶಕ. ನಿರ್ಮಾಪಕ ಲಿಖೀತ್‌ ಶೆಟ್ಟಿ ಅವರು ಈ ಚಿತ್ರದ ನಾಯಕ ಕೂಡ. ಅಮೃತ ಅಯ್ಯಂಗಾರ್‌ ನಾಯಕಿ.

ಇದನ್ನೂ ಓದಿ:ಮುರಿದು ಬಿದ್ದ ಮದುವೆ : ಮನೆ ಬಿಟ್ಟು ಮಠ ಸೇರಿದ ಬಿಗ್ ನಟಿ ಚೈತ್ರಾ ಕೊಟ್ಟುರ

ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಸಿಹಿಕಹಿ ಚಂದ್ರು, ಪದ್ಮಜಾ ರಾವ್‌, ಶರ್ಮಿತಾ ಗೌಡ, ನಾಗಭೂಷಣ್‌ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.

Advertisement

ಗುರುಕಿರಣ್‌ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್‌ಕುಮಾರ್‌ ಅವರ ಸಂಕಲನವಿದೆ. ಮಾಸ್ತಿ ಫ್ಯಾಮಿಲಿ ಪ್ಯಾಕ್‌ ಗೆ ಸಂಭಾಷಣೆ ಬರೆದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next