Advertisement

ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುವ ಹಡಗು, ಸದ್ಯಕ್ಕೆ ಅದು ಆಕ್ಸಿಜನ್ ಸಪೋರ್ಟ್ ನಲ್ಲಿದೆ:ನಳಿನ್

07:29 PM Dec 27, 2020 | Adarsha |

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಬಿಜೆಪಿ ಉತ್ತಮ ಪೂರ್ವತಯಾರಿ ಮಾಡಿಕೊಂಡಿತ್ತು. ಅಲ್ಲದೆ ಬಿಜೆಪಿ ಹಮ್ಮಿಕೊಂಡ ಕುಟುಂಬ ಮಿಲನ, ಪಂಚರತ್ನ ಯೋಜನೆಗಳು ಅತ್ಯಂತ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

Advertisement

ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಗ್ರಾ.ಪಂ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು ಎರಡೂ ಹಂತದ ಚುನಾವಣೆಯಲ್ಲಿ ಉತ್ತಮ ಶೇಕಡವಾರು ಮತದಾನ  ಆಗಿದ್ದು ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರಿಗೆ ರಾಜ್ಯಾದ್ಯಂತ ಅಭೂತಪೂರ್ವ ಬೆಂಬಲ ಸಿಕ್ಕಿದೆ. ರಾಜ್ಯಾದ್ಯಂತ ಬಿಜೆಪಿ ಪರ ಒಲವು ಕಂಡುಬರುತ್ತಿದೆ ಇದಕ್ಕೆಲ್ಲಾ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಅಭಿವೃದ್ಧಿ ಕಾರ್ಯವೇ ಶ್ರೀರಕ್ಷೆ ಎಂದರು.

ಈ ಸಂದರ್ಭದಲ್ಲಿ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಪಕ್ಷದ ಭಾಗವಹಿಸುವಿಕೆಯ ಕುರಿತಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆಯಾಗಿತ್ತು. ಮತಗಟ್ಟೆಯಲ್ಲಿ ಕೆಲಸ ಮಾಡಲು ಕಾರ್ಯಕರ್ತರೇ ಇರಲಿಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ  ಕಾಂಗ್ರೆಸ್ ಮುಳುಗುವ ಹಡಗಾಗಿದ್ದು ಸದ್ಯಕ್ಕೆ ಕಾಂಗ್ರೆಸ್ ಆಕ್ಸಿಜನ್ ನಲ್ಲಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:15 ವರ್ಷದ ಬಳಿಕ ತನ್ನ ಹುಟ್ಟೂರಿನಲ್ಲಿ ಮತಚಲಾಯಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್

ಈ ನಡುವೆ ತಮ್ಮ ಕಚೇರಿಗೆ ಪಿಎಫ್ ಐ ಕಾರ್ಯಕರ್ತರು ಮುತ್ತಿಗೆ ವಿಚಾರವನ್ನು ಪ್ರಸ್ತಾಪಿಸಿದ ಅವರು ಕೆಎಫ್ ಡಿ ದೇಶದ್ರೋಹಿ ಚಟುವಟಿಕೆ ನಡೆಸುತ್ತಿದೆ ಈ ಕುರಿತಾಗಿ ಕಾನೂನು ತನ್ನದೇ ಕ್ರಮಕೈಗೊಳ್ಳುತ್ತದೆ. ಈ ತರದ ಯಾವುದೇ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಯಾವುದೇ ಬಂಧನ ಆದಾಗ ಕಾನೂನು ಪ್ರಕಾರ ಹೋರಾಟ ಮಾಡಬೇಕೇ ಹೊರತು ಮುತ್ತಿಗೆ ಹಾಕುವುದಲ್ಲ. ಈ ರೀತಿ ಮುತ್ತಿಗೆ ಹಾಕುವುದೇ ಒಂದು ರೀತಿಯ ಭಯೋತ್ಪಾದನಾ ಚಟುವಟಿಕೆಯಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಗಂಭೀರತೆ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಇದನ್ನೂ ಓದಿ:ಶಾಲೆ ಪುನಾರಂಭ: ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ

ಇತ್ತೀಚಿಗೆ ಮಂಗಳೂರಿನಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಗೋಡೆ ಬರಹದಲ್ಲಿ ಬರೆಯಲಾಗಿತ್ತು. ಈ ಎಲ್ಲಾ ಕೃತ್ಯದ ಹಿಂದೆ ಭಯೋತ್ಪಾದನಾ ಚಟುವಟಿಕೆ ಇದೆ ಎಂದು ಅನಿಸುತ್ತದೆ. ಈ ಘಟನೆಗಳ ಕುರಿತಾಗಿ ನಮ್ಮ ಸರ್ಕಾರ ಎಂದಿಗೂ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ. ಎಲ್ಲದಕ್ಕೂ ತಕ್ಕ ಉತ್ತರ ನೀಡಲು ನಮ್ಮ ಸರಕಾರ ಸಿದ್ಧವಾಗಿದೆ ಎಂದು ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next