Advertisement

ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ: ಪ್ರಧಾನಿ ಮೋದಿ ಘೋಷಣೆ

12:27 PM Mar 15, 2022 | Team Udayavani |

ನವದೆಹಲಿ: ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಮಾರ್ಚ್ 15) ನಡೆದ ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಸ್ಪಷ್ಟ ಸಂದೇಶವನ್ನು ರವಾನಿಸಿರುವುದಾಗಿ ಮೂಲಗಳು ತಿಳಿಸಿವೆ.

Advertisement

ಇದನ್ನೂ ಓದಿ:ಸಾಂವಿಧಾನಿಕ ಹಕ್ಕಿಗಾಗಿ ಮೇಲ್ಮನವಿ ಸಲ್ಲಿಸಲು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿರ್ಧಾರ

“ನಮ್ಮ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ಇತರ ಪಕ್ಷಗಳಲ್ಲಿ ಇರುವ ವಂಶಾಡಳಿತದ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಒಂದು ವೇಳೆ ಯಾರ ಮಕ್ಕಳಿಗಾದರು ಟಿಕೆಟ್ ನಿರಾಕರಿಸಿದರೆ ಅದರ ಹೊಣೆ ನಾನೇ ಹೊರುತ್ತೇನೆ ಎಂದು ಹೇಳಿರುವುದಾಗಿ ವರದಿ ವಿವರಿಸಿದೆ.

ಸಭೆಯಲ್ಲಿ ಯುದ್ಧಗ್ರಸ್ಥ ಉಕ್ರೇನ್ ನಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿಯವರು ಮಾಹಿತಿ ನೀಡಿದ್ದು, ಮೂಲಗಳ ಪ್ರಕಾರ, ಬಿಜೆಪಿಯೇತರ ಮುಖ್ಯಮಂತ್ರಿಗಳು ಉಕ್ರೇನ್ ವಿಚಾರವನ್ನು ರಾಜಕೀಯಗೊಳಿಸಿರುವುದಾಗಿ ಆರೋಪಿಸಿದ್ದಾರೆ ಎಂದು ವರದಿ ಹೇಳಿದೆ.

ಸಭೆಯಲ್ಲಿ ಕಾಶ್ಮೀರ ಫೈಲ್ಸ್ ಸಿನಿಮಾದ ಬಗ್ಗೆ ಪ್ರಸ್ತಾಪ:

Advertisement

ಬಿಜೆಪಿ ಸಂಸದ ಮನೋಜ್ ತಿವಾರಿ ತಿಳಿಸಿರುವಂತೆ, ಸಭೆಯಲ್ಲಿ ಪ್ರಧಾನಿ ಮೋದಿ ಅವರು ಕಾಶ್ಮೀರ ಫೈಲ್ಸ್ ಸಿನಿಮಾದ ಬಗ್ಗೆ ಧ್ವನಿ ಎತ್ತಿದ್ದು, ಕೆಲವೊಂದು ಗುಂಪುಗಳು ಈಗಲೂ ಸತ್ಯವನ್ನು ಸಮಾಧಿ ಮಾಡಲು ಹೊರಟಿವೆ. ನಾವು ಇಂತಹ ಸತ್ಯಗಳನ್ನು ದೇಶದ ಜನರ ಮುಂದಿಡಬೇಕೆಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ.

ಪಂಚರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಕಳಪೆ ಸಾಧನೆ ಮಾಡಿರುವ ಕ್ಷೇತ್ರಗಳ ಬಗ್ಗೆ ಕಾರಣದ ಕುರಿತು ಪರಿಶೀಲನೆ ನಡೆಸಬೇಕು ಎಂದು ಪ್ರಧಾನಿ ಮೋದಿ ಅವರು ಪಕ್ಷದ ಸಂಸದರಿಗೆ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next